HPCL Recruitment 2022: ದೇಶೀಯ ತೈಲ ಪೂರೈಕೆ ಕಂಪೆನಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ . ಈ ನೇಮಕಾತಿ ಅಡಿಯಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 186 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಯಾವ ವಿಭಾಗಗಳಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ.? ಅರ್ಜಿ ಸಲ್ಲಿಸುವುದು ಹೇಗೆ? ಸಂಪೂರ್ಣ ವಿವರಗಳು ಈ ಕೆಳಗಿನಂತಿವೆ.
* ಅಧಿಸೂಚನೆಯಲ್ಲಿ ತಿಳಿಸಿರುವಂತೆ ಒಟ್ಟು 186 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
* ಇವುಗಳಲ್ಲಿ ಕಾರ್ಯಾಚರಣೆ ತಂತ್ರಜ್ಞ (94), ಬಾಯ್ಲರ್ ತಂತ್ರಜ್ಞ (18), ನಿರ್ವಹಣೆ ತಂತ್ರಜ್ಞ (40), ಜೂನಿಯರ್ ಅಗ್ನಿಶಾಮಕ ಮತ್ತು ಸುರಕ್ಷತೆ ಬೋಧಕ (18), ಮತ್ತು ಲ್ಯಾಬ್ ಸಹಾಯಕ (16) ಹುದ್ದೆಗಳು ಸೇರಿವೆ.
* ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಕ್ಷೇತ್ರಗಳಲ್ಲಿ ಪದವಿ ಪೂರ್ಣಗೊಳಿಸಿರಬೇಕು.
* ಅಭ್ಯರ್ಥಿಗಳು 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು.
* ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
* ಲಿಖಿತ ಪರೀಕ್ಷೆಯಲ್ಲಿನ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಅರ್ಜಿ ಶುಲ್ಕ ರೂ. 590 ಪಾವತಿಸಬೇಕು. SC, ST, PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
* ಅರ್ಜಿ ಸಲ್ಲಸಲು ಕೊನೆಯ ದಿನಾಂಕ ಮೇ 1, 2022.
* ಈ ನೇಮಕಾತಿ ಕುರಿತಾದ ಸಂಪೂರ್ಣ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ .
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ