AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priya Nair: HULನ ಮೊದಲ ಮಹಿಳಾ CEO ಆಗಿ ಪ್ರಿಯಾ ನಾಯರ್‌ ನೇಮಕ; ಇವರ ಸಂಬಳ ಎಷ್ಟಿದೆ ಗೊತ್ತಾ?

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ಪ್ರಿಯಾ ನಾಯರ್ ಅವರನ್ನು ತನ್ನ ಹೊಸ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೇಶಕಿ (MD)ಯಾಗಿ ನೇಮಕ ಮಾಡಿದೆ. HULನ 93 ವರ್ಷಗಳ ಇತಿಹಾಸದಲ್ಲಿ ಮಹಿಳೆಯೊಬ್ಬರು ಈ ಸ್ಥಾನಕ್ಕೆ ಆಯ್ಕೆಯಾಗಿರುವುದು ಇದೇ ಮೊದಲು. 30 ವರ್ಷಗಳ ಅನುಭವ ಹೊಂದಿರುವ ಪ್ರಿಯಾ ನಾಯರ್ ಅವರ ಶೈಕ್ಷಣಿಕ ಹಿನ್ನೆಲೆ, ವೇತನ ಮತ್ತು ವೃತ್ತಿಪರ ಸಾಧನೆಗಳ ಬಗ್ಗೆ ಇಲ್ಲಿದೆ ಮಾಹಿತಿ.

Priya Nair: HULನ ಮೊದಲ ಮಹಿಳಾ CEO ಆಗಿ ಪ್ರಿಯಾ ನಾಯರ್‌ ನೇಮಕ; ಇವರ ಸಂಬಳ ಎಷ್ಟಿದೆ ಗೊತ್ತಾ?
ಪ್ರಿಯಾ ನಾಯರ್
ಅಕ್ಷತಾ ವರ್ಕಾಡಿ
|

Updated on:Jul 11, 2025 | 1:02 PM

Share

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ಮತ್ತು ವ್ಯವಸ್ಥಾಪಕ ನಿರ್ದೇಶಕಿ(MD)ಯಾಗಿ ಪ್ರಿಯಾ ನಾಯರ್ ಅವರನ್ನು ನೇಮಕ ಮಾಡಿದೆ. ಈ ಪ್ರತಿಷ್ಠಿತ ಕಂಪೆನಿ ತನ್ನ 93 ವರ್ಷಗಳ ಪ್ರಯಾಣದಲ್ಲಿ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಿರುವುದು ವಿಶೇಷ. ಈ ಮೂಲಕ ಪ್ರಿಯಾ ನಾಯರ್ HUL ನ ಮೊದಲ ಮಹಿಳಾ ಸಿಇಒ ಎಂಬ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ನಾಯರ್ ಆಗಸ್ಟ್ 1 ರಿಂದ ಕಂಪನಿಯ ಹೊಸ CEO ಮತ್ತು MD ಆಗಿ ನೇಮಕಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಕಳೆದ 30 ವರ್ಷಗಳಿಂದ HUL ಕಂಪನಿಯೊಂದಿಗೆ ಸಂಬಂಧ ಹೊಂದಿದ್ದ ಪ್ರಿಯಾ ಡವ್ ಮತ್ತು ಸನ್‌ಸಿಲ್ಕ್‌ನಂತಹ ಬ್ರ್ಯಾಂಡ್‌ಗಳನ್ನು ಮುನ್ನಡೆಸಿದ್ದಾರೆ. ಆದ್ದರಿಂದ ಪ್ರಿಯಾ ನಾಯರ್​ ಯಾರು, ಅವರ ಶೈಕ್ಷಣಿಕ ಅರ್ಹತೆಗಳೇನು? ಈ ಹುದ್ದೆಯಲ್ಲಿ ಅವರಿಗೆ ಸಿಗುವ ಸಂಬಳ ಎಷ್ಟು? ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳೋಣ.

ಪ್ರಿಯಾ ನಾಯರ್ ಯಾರು?

HUL ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಪಾತ್ರರಾದ ಪ್ರಿಯಾ ನಾಯರ್​​ 1995 ರಲ್ಲಿ ಈ FMCG ಕಂಪನಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಹೋಂ ಕೇರ್‌ನ ಕಾರ್ಯನಿರ್ವಾಹಕ ನಿರ್ದೇಶಕಿ, ಬ್ಯೂಟಿ ಆ್ಯಂಡ್​​ ಸ್ಕೀನ್​ ಕೇರ್​​ನ ಕಾರ್ಯನಿರ್ವಾಹಕ ನಿರ್ದೇಶಕಿ ಸೇರಿದಂತೆ ಹಲವಾರು ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಅವರ ಮೂರು ದಶಕಗಳ ವೃತ್ತಿಜೀವನದಲ್ಲಿ, ಅವರು ಡವ್, ಸನ್‌ಸಿಲ್ಕ್, ರಿನ್ ಮತ್ತು ವ್ಯಾಸಲೀನ್‌ನಂತಹ ಜನಪ್ರಿಯ ಬ್ರ್ಯಾಂಡ್‌ಗಳನ್ನು ಮುನ್ನಡೆಸಿದ್ದಾರೆ.

ಇದನ್ನೂ ಓದಿ
Image
ಜೂನಿಯರ್​ಗಳಿಗೆ ವಾಟ್ಸಾಪ್​​​ನಲ್ಲಿ ಕಿರುಕುಳ ನೀಡಿದ್ರು ಕೂಡ ರ‍್ಯಾಗಿಂಗ್!
Image
ಆಪಲ್‌ನ ಹೊಸ COO ಆಗಿ ಭಾರತ ಮೂಲದ ಸಬಿಹ್ ಖಾನ್ ನೇಮಕ; ಸಂಬಳ ಎಷ್ಟು ಗೊತ್ತಾ?
Image
ಅಮೆರಿಕದಲ್ಲಿ ಅಧ್ಯಯನ ಮಾಡಲು ಬಯಸುವ ಭಾರತೀಯರಿಗೆ ಗುಡ್​​ ನ್ಯೂಸ್​
Image
ಎಸ್ಎಸ್ಎಲ್​ಸಿಯಲ್ಲಿ 100 ಅಂಕ ಇಳಿಕೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪ ವಿರೋಧ

ಪ್ರಿಯಾ ನಾಯರ್ ವಿದ್ಯಾಭ್ಯಾಸ:

ಪ್ರಿಯಾ ನಾಯರ್ ಹಾರ್ವರ್ಡ್ ಬಿಸಿನೆಸ್ ಸ್ಕೂಲ್‌ನಿಂದ ವ್ಯವಹಾರ ಆಡಳಿತ ಮತ್ತು ನಿರ್ವಹಣೆಯನ್ನು ಅಧ್ಯಯನ ಮಾಡಿದ್ದಾರೆ. 1994 ರಲ್ಲಿ ಪುಣೆ ಮೂಲದ ಸಿಂಬಿಯೋಸಿಸ್ ಇನ್‌ಸ್ಟಿಟ್ಯೂಟ್ ಆಫ್ ಬಿಸಿನೆಸ್ ಮ್ಯಾನೇಜ್‌ಮೆಂಟ್‌(Business administration and management) ನಿಂದ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಶಿಕ್ಷಣ ಸಂಸ್ಥೆ ಯಾವುದು ಗೊತ್ತಾ?

HUL ಹೊಸ ಸಿಇಒ ಪ್ರಿಯಾ ನಾಯರ್ ಎಷ್ಟು ಸಂಬಳ ಪಡೆಯಲಿದ್ದಾರೆ?

ಪ್ರಿಯಾ ನಾಯರ್ ಅವರು 2025ರ ಆಗಸ್ಟ್ 1 ರಿಂದ 2030 ರ ಜುಲೈ 31 ರವರೆಗೆ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಕಂಪನಿಯ ಪ್ರಸ್ತುತ ಸಿಇಒ ರೋಹಿತ್ ಜಾವಾ ಅವರು 2025 ರ ಹಣಕಾಸು ವರ್ಷದಲ್ಲಿ ಒಟ್ಟು 23.23 ಕೋಟಿ ರೂ. ಸಂಬಳವನ್ನು ಪಡೆದಿದ್ದಾರೆ, ಇದರಲ್ಲಿ ರೂ. 3.65 ಕೋಟಿ ಸಂಬಳ, ರೂ. 11.45 ಕೋಟಿ ಭತ್ಯೆಗಳು, ರೂ. 3.78 ಕೋಟಿ ಬೋನಸ್ ಮತ್ತು ರೂ. 2.76 ಕೋಟಿ ದೀರ್ಘಾವಧಿ ಪ್ರೋತ್ಸಾಹಕಗಳು ಸೇರಿವೆ. ನಾಯರ್ ಕೂಡ ಇದೇ ರೀತಿ ಸಂಬಳ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ. ಆದರೆ ಈ ಕುರಿತು ಯಾವುದೇ ರೀತಿಯ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Fri, 11 July 25

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ