AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HURL Recruitment 2025: HURL ನಲ್ಲಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ನಾಳೆಯೇ ಕೊನೆಯ ದಿನಾಂಕ

ಹಿಂದೂಸ್ತಾನ್ ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಲಿಮಿಟೆಡ್ (HURL) 43ಕ್ಕೂ ಹೆಚ್ಚು ಇಂಜಿನಿಯರ್ ಮತ್ತು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಇಂಜಿನಿಯರಿಂಗ್ ಪದವೀಧರರು ಮತ್ತು MBA ಪದವೀಧರರಿಗೆ ಈ ಅವಕಾಶವಿದೆ. ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನವನ್ನು ಒಳಗೊಂಡಿದೆ. ವೇತನ ರೂ. 40,000 ರಿಂದ ರೂ 1,50,000 ವರೆಗೆ ಇದೆ.

HURL Recruitment 2025: HURL ನಲ್ಲಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ನಾಳೆಯೇ ಕೊನೆಯ ದಿನಾಂಕ
Hurl Recruitment 2025
ಅಕ್ಷತಾ ವರ್ಕಾಡಿ
|

Updated on:Jan 28, 2025 | 12:31 PM

Share

ಹಿಂದೂಸ್ತಾನ್ ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಲಿಮಿಟೆಡ್ (HURL) ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 29. ಅರ್ಜಿ ಸಲ್ಲಿಸುವ ಯಾವುದೇ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ಇಂಜಿನಿಯರ್, ಸೀನಿಯರ್ ಇಂಜಿನಿಯರ್ ಮತ್ತು ಆಫೀಸರ್ ಸೇರಿದಂತೆ ಒಟ್ಟು 43 ಹುದ್ದೆಗಳನ್ನು ಈ ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಬೇಕಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಹತೆ ಹೊಂದಿರಬೇಕು ಮತ್ತು ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಯಾವ ವಯಸ್ಸಿನವರೆಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ಶೈಕ್ಷಣಿಕ ಅರ್ಹತೆ:

ಇಂಜಿನಿಯರ್/ಸೀನಿಯರ್ ಇಂಜಿನಿಯರ್ (ಕೆಮಿಕಲ್, ಅಮೋನಿಯಾ, ಯೂರಿಯಾ, O&U) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಶೇ. 60 ಅಂಕಗಳೊಂದಿಗೆ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಇಂಜಿನಿಯರ್/ಸೀನಿಯರ್ ಇಂಜಿನಿಯರ್ (ಮೆಕ್ಯಾನಿಕಲ್, ಇನ್‌ಸ್ಟ್ರುಮೆಂಟೇಶನ್) ಹುದ್ದೆಗಳಿಗೆ ಸಂಬಂಧಪಟ್ಟ ವಿಷಯದಲ್ಲಿ ಶೇ.60 ಅಂಕಗಳೊಂದಿಗೆ ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ಅಧಿಕಾರಿ ಹುದ್ದೆಗಳಿಗೆ ಅಭ್ಯರ್ಥಿಗಳು CM, CMA ಅಥವಾ MBA ಪದವಿಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ ಏನು?

ಹಿರಿಯ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ನಿಗದಿಪಡಿಸಲಾಗಿದ್ದು, ಇಂಜಿನಿಯರ್ ಹುದ್ದೆಗಳಿಗೆ ಈ ಮಿತಿ 30 ವರ್ಷಗಳಾಗಿವೆ. ವಯಸ್ಸಿನ ಮಿತಿಯನ್ನು 2024 ರ ಡಿಸೆಂಬರ್ 31ರ ಆಧಾರದ ಮೇಲೆ ಲೆಕ್ಕಹಾಕಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • HURL ನ ಅಧಿಕೃತ ವೆಬ್‌ಸೈಟ್ https://hurl.net.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ “ಕೆರಿಯರ್” ವಿಭಾಗಕ್ಕೆ ಹೋಗಿ ಮತ್ತು “ಉದ್ಯೋಗ ತೆರೆಯುವಿಕೆಗಳು” ಕ್ಲಿಕ್ ಮಾಡಿ.
  • ನೇಮಕಾತಿ ಸಂಬಂಧಿತ ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ ಮತ್ತು ಅದನ್ನು ಎಚ್ಚರಿಕೆಯಿಂದ ಓದಿ.
  • ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿ.
  • ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಮತ್ತು ಸಲ್ಲಿಸಿ.
  • ಅರ್ಜಿಯ ಪ್ರಿಂಟ್ ಔಟ್ ತೆಗೆದುಕೊಂಡು ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ.

ಇದನ್ನೂ ಓದಿ: ರೈಲ್ವೆ ಉದ್ಯೋಗ ಪಡೆಯಲು ಸುವರ್ಣಾವಕಾಶ, 32,000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಸ್ಕ್ರೀನಿಂಗ್ ಮತ್ತು ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಯಶಸ್ವಿಯಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಕಾಣಿಸಿಕೊಳ್ಳುತ್ತಾರೆ. ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ 40,000 ರಿಂದ ರೂ 1,50,000 ವರೆಗೆ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:52 am, Tue, 28 January 25

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?