IAF AFCAT Recruitment 2022: 12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ

IAF AFCAT Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಜೊತೆಗೆ ಬೌತಶಾಸ್ತ್ರ ಶೇ.60 ರಷ್ಟು, ಹಾಗೂ ಇತರೆ ವಿಷಯಗಳಲ್ಲಿ ಶೇ.50 ರಷ್ಟು ಅಂಕಗಳನ್ನು ಪಡೆದಿರಬೇಕು.

IAF AFCAT Recruitment 2022: 12ನೇ ತರಗತಿ ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ
Jobs
Follow us
TV9 Web
| Updated By: ಝಾಹಿರ್ ಯೂಸುಫ್

Updated on:Nov 30, 2022 | 2:37 PM

IAF AFCAT Recruitment 2022: ಭಾರತೀಯ ವಾಯುಪಡೆಯಲ್ಲಿ (IAF) ಅಧಿಕಾರಿಯಾಗುವ ಕನಸು ಕಾಣುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ. ಭಾರತೀಯ ವಾಯುಪಡೆಯು ಫ್ಲೈಯಿಂಗ್ ಬ್ರಾಂಚ್‌ನಲ್ಲಿ ಆಫೀಸರ್ (IAF AFCAT), ಗ್ರೌಂಡ್ ಡ್ಯೂಟಿ ಮತ್ತು ಶಿಕ್ಷಣ ಶಾಖೆಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IAF ನ ಅಧಿಕೃತ ವೆಬ್‌ಸೈಟ್, afcat.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ನಾಳೆ ಅಂದರೆ ಡಿಸೆಂಬರ್ 1 ರಿಂದ ಪ್ರಾರಂಭವಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 258

ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಪಾಸ್ ಆಗಿರಬೇಕು. ಜೊತೆಗೆ ಬೌತಶಾಸ್ತ್ರ ಶೇ.60 ರಷ್ಟು, ಹಾಗೂ ಇತರೆ ವಿಷಯಗಳಲ್ಲಿ ಶೇ.50 ರಷ್ಟು ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ
Image
IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ
Image
Indian Navy SSR Recruitment 2022: ನೌಕಾಪಡೆಯ ಅಗ್ನಿವೀರರ ನೇಮಕಾತಿ: PUC ಪಾಸಾದವರಿಗೆ ಉದ್ಯೋಗಾವಕಾಶ
Image
Indian Railway Recruitment 2022: ರೈಲ್ವೆ ನೇಮಕಾತಿ: 596 ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ECIL Recruitment 2022: ECIL ನೇಮಕಾತಿ: ಮಾಸಿಕ ವೇತನ 31 ಸಾವಿರ ರೂ.

ವಯೋಮಿತಿ: ಫ್ಲೈಯಿಂಗ್ ಬ್ರಾಂಚ್ – 20 ರಿಂದ 24 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರೌಂಡ್ ಡ್ಯೂಟಿ (ತಾಂತ್ರಿಕ/ತಾಂತ್ರಿಕೇತರ) ಶಾಖೆಗಳು – 20 ರಿಂದ 26 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ:

  • AFCAT ಹುದ್ದೆಗಳಿಗೆ- Rs.250/- ರೂ.
  • NCC- ಯಾವುದೇ ಶುಲ್ಕವಿಲ್ಲ

ಇದನ್ನೂ ಓದಿ: IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿದೆ ಉದ್ಯೋಗಾವಕಾಶ

ಆಯ್ಕೆ ಪ್ರಕ್ರಿಯೆ: AFCAT ಲಿಖಿತ ಪರೀಕ್ಷೆಯ ನಂತರ ಅಧಿಕಾರಿಗಳ ಗುಪ್ತಚರ ರೇಟಿಂಗ್ ಪರೀಕ್ಷೆ ಮತ್ತು ಚಿತ್ರ ಗ್ರಹಿಕೆ ಮತ್ತು ಚರ್ಚಾ ಪರೀಕ್ಷೆ, ಮಾನಸಿಕ ಪರೀಕ್ಷೆ ಮತ್ತು ಗ್ರೂಪ್ ಟೆಸ್ಟ್​/ಸಂದರ್ಶನ ಸೇರಿದಂತೆ ಮೂರು ಸುತ್ತುಗಳಿರುತ್ತವೆ. ಈ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

  • ಆನ್‌ಲೈನ್​ನಲ್ಲಿ ಅಪ್ಲಿಕೇಶನ್‌ ಸಲ್ಲಿಸಲು ಪ್ರಾರಂಭ ದಿನಾಂಕ – 1 ಡಿಸೆಂಬರ್, 2022
  • ಆನ್‌ಲೈನ್ ಅಪ್ಲಿಕೇಶನ್‌ ಸಲ್ಲಿಸಲು ಕೊನೆಯ ದಿನಾಂಕ – 30 ಡಿಸೆಂಬರ್, 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

Published On - 2:37 pm, Wed, 30 November 22

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ