IAF AFCAT Recruitment 2022: ಭಾರತೀಯ ವಾಯುಪಡೆಯ ಪ್ರಮುಖ ಹುದ್ದೆಗಳಿಗೆ ಅರ್ಜಿ ಆಹ್ವಾನ
IAF AFCAT Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IAF AFCAT ನ ಅಧಿಕೃತ ವೆಬ್‌ಸೈಟ್ afcat.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
IAF AFCAT Recruitment 2022: ಫ್ಲೈಯಿಂಗ್ ಬ್ರಾಂಚ್ ಮತ್ತು ಪರ್ಮನೆಂಟ್ ಕಮಿಷನ್ (PC) ಮತ್ತು ಶಾರ್ಟ್ ಸರ್ವಿಸ್ ಕಮಿಷನ್ (SSC) ಅಡಿಯಲ್ಲಿ ಶಾರ್ಟ್ ಸರ್ವಿಸ್ ಕಮಿಷನ್ (SSC) ನ ಗ್ರೌಂಡ್ ಡ್ಯೂಟಿ (ತಾಂತ್ರಿಕ ಮತ್ತು ತಾಂತ್ರಿಕೇತರ) ಶಾಖೆಗಳಿಗೆ ಭಾರತೀಯ ವಾಯುಪಡೆ (IAF) ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IAF AFCAT ನ ಅಧಿಕೃತ ವೆಬ್‌ಸೈಟ್ afcat.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ – 283
ವಿದ್ಯಾರ್ಹತೆ: ಆಸಕ್ತ ಅಭ್ಯರ್ಥಿಗಳು 12ನೇ ತರಗತಿಯ ಪರೀಕ್ಷೆಗಳಲ್ಲಿ (ಗಣಿತ ಮತ್ತು ಭೌತಶಾಸ್ತ್ರ) ಕನಿಷ್ಠ 50 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಹಾಗೆಯೇ ಶೇಕಡಾ 60 ಅಂಕಗಳೊಂದಿಗೆ ಮೂರು ವರ್ಷಗಳ ಪದವಿ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು ಅಥವಾ ನಾಲ್ಕು ವರ್ಷಗಳ BE /ಬಿ.ಟೆಕ್ ಪದವಿಯನ್ನು ಮಾಡಿರಬೇಕು.
ವಯೋಮಿತಿ: ಫ್ಲೈಯಿಂಗ್ ಬ್ರಾಂಚ್ – ಈ ಹುದ್ದೆಗಳಿಗೆ 20 ರಿಂದ 24 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಗ್ರೌಂಡ್ ಡ್ಯೂಟಿ (ತಾಂತ್ರಿಕ/ತಾಂತ್ರಿಕೇತರ) ಶಾಖೆ- ಈ ಹುದ್ದೆಗಳಿಗೆ 20 ರಿಂದ 26 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 30, 2022.
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.