AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agniveer Vayu Recruitment 2026: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು!

ಭಾರತೀಯ ವಾಯುಪಡೆಯ ಅಗ್ನಿವೀರ್ ವಾಯು 2026ರ ನೇಮಕಾತಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 1, 2026ರವರೆಗೆ ಅರ್ಜಿ ಸಲ್ಲಿಸಬಹುದು. 12ನೇ ತರಗತಿ ಅಥವಾ ಎಂಜಿನಿಯರಿಂಗ್ ಡಿಪ್ಲೊಮಾ ಅರ್ಹತೆಯುಳ್ಳ 21 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರು. ದೇಶಸೇವೆಯ ಈ ಉತ್ತಮ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Agniveer Vayu Recruitment 2026: ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು!
ಅಗ್ನಿವೀರ್ ವಾಯು ನೇಮಕಾತಿ
ಅಕ್ಷತಾ ವರ್ಕಾಡಿ
|

Updated on: Jan 27, 2026 | 3:05 PM

Share

ಕೇಂದ್ರ ರಕ್ಷಣಾ ಸಚಿವಾಲಯದ ಘಟಕವಾದ ಭಾರತೀಯ ವಾಯುಪಡೆ 2026ರ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಹರಾದ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶಸೇವೆಯೊಂದಿಗೆ ಶಿಸ್ತು, ಗೌರವ ಮತ್ತು ಭವಿಷ್ಯದ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಯುವಜನರಿಗೆ ಅಗ್ನಿವೀರ್ ವಾಯು ನೇಮಕಾತಿ ಒಂದು ಮಹತ್ವದ ಅವಕಾಶವಾಗಿದೆ.

ಅರ್ಜಿ ಪ್ರಕ್ರಿಯೆ ಮತ್ತು ಕೊನೆಯ ದಿನಾಂಕ:

ಅಗ್ನಿವೀರ್ ವಾಯು ನೇಮಕಾತಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಜನವರಿ 12 ರಿಂದ ಆರಂಭಗೊಂಡಿದ್ದು, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 1, 2026ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಕೆಳಕಂಡ ಯಾವುದಾದರೂ ಅರ್ಹತೆಯನ್ನು ಹೊಂದಿರಬೇಕು:

  • ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ ಕನಿಷ್ಠ ಶೇ.50 ಅಂಕಗಳೊಂದಿಗೆ ಇಂಟರ್ಮೀಡಿಯೇಟ್ (12ನೇ ತರಗತಿ) ಉತ್ತೀರ್ಣರಾಗಿರಬೇಕು.
  • ಅಥವಾ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್ಸ್ಟ್ರುಮೆಂಟೇಶನ್ ಟೆಕ್ನಾಲಜಿ ಅಥವಾ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಮೂರು ವರ್ಷಗಳ ಎಂಜಿನಿಯರಿಂಗ್ ಡಿಪ್ಲೊಮಾ ಉತ್ತೀರ್ಣರಾಗಿರಬೇಕು.
  • ಅಥವಾ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳೊಂದಿಗೆ ಎರಡು ವರ್ಷಗಳ ವೃತ್ತಿಪರ ಅಥವಾ ವೃತ್ತಿಪರೇತರ ಕೋರ್ಸ್ ಪೂರ್ಣಗೊಳಿಸಿರಬೇಕು.
  • ವಿಜ್ಞಾನ ವಿಷಯಗಳನ್ನು ಹೊರತುಪಡಿಸಿ ಇತರ ಗುಂಪುಗಳಲ್ಲಿ ಇಂಟರ್ಮೀಡಿಯೇಟ್ ಓದಿದ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸುವ ಅವಕಾಶವಿದ್ದು, ಅವರು ಇಂಗ್ಲಿಷ್‌ನಲ್ಲಿ ಕನಿಷ್ಠ ಶೇ. 50 ಅಂಕಗಳನ್ನು ಪಡೆದಿರಬೇಕು.

ಇದನ್ನೂ ಓದಿ: ಸುಪ್ರೀಂ ಕೋರ್ಟ್​​ನಲ್ಲಿ 90 ಕಾನೂನು ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ:

ಅಭ್ಯರ್ಥಿಗಳು ಜನವರಿ 1, 2006 ಮತ್ತು ಜುಲೈ 1, 2009ರ ನಡುವೆ ಜನಿಸಿರಬೇಕು. ಅಂದರೆ, ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯ ವಯಸ್ಸು 21 ವರ್ಷ ಮೀರಿರಬಾರದು.

ದೈಹಿಕ ಅರ್ಹತೆ:

ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವ ದೈಹಿಕ ಮತ್ತು ವೈದ್ಯಕೀಯ ಮಾನದಂಡಗಳನ್ನು ಕಡ್ಡಾಯವಾಗಿ ಪೂರೈಸಬೇಕು. ಎತ್ತರ, ತೂಕ, ಎದೆಮಟ್ಟ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಗಳು ಆಯ್ಕೆ ಪ್ರಕ್ರಿಯೆಯ ಭಾಗವಾಗಿರುತ್ತವೆ.

ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಲಾಗಿದೆ. ದೇಶಸೇವೆಯೊಂದಿಗೆ ಶಿಸ್ತು, ಗೌರವ ಮತ್ತು ಭವಿಷ್ಯದ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಯುವಜನರಿಗೆ ಅಗ್ನಿವೀರ್ ವಾಯು ನೇಮಕಾತಿ ಒಂದು ಮಹತ್ವದ ಅವಕಾಶವಾಗಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಜಾರಿಗೆ ಬಂದಿದೆ ಹೊಸ ನಿಯಮ
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಬೆಟಗೇರಿಯ ನಿಗೂಢ ಗವಿಯಲ್ಲೂ ಇದ್ಯಂತೆ ನಿಧಿ! ಸಂಪತ್ತಿಗಿದ್ಯಾ ಸರ್ಪಗಾವಲು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಗಿಲ್ಲಿಯ ಆರಂಭದ ದಿನಗಳು ಹೇಗಿದ್ದವು? ಆಪ್ತ ಗುರು ಹೇಳಿದ್ದೇನು?
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಪತ್ನಿ ಎಲ್ಲಿದ್ದರೂ ಪತಿಗೆ ಗೊತ್ತಾಗ್ತಿತ್ತು ಲೊಕೇಷನ್!
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಬಿಗ್ ಬಾಸ್​ನಿಂದ ಹೊರಬಂದ ಬಳಿಕ ಧ್ರುವಂತ್ ಸಂಪರ್ಕಿಸಿಯೇ ಇಲ್ಲ; ಮಲ್ಲಮ್ಮ
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
ಸ್ವಂತ ದುಡಿಮೆಯಲ್ಲಿ ಕಾರು ಖರೀದಿಸಿದ ಮಂಗಳೂರಿನ ವಿಶೇಷ ಚೇತನ ಯುವಕ!
‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್
‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್
ಹಾಡಹಗಲೇ ನಡುರಸ್ತೆಯಲ್ಲೇ ಸಿನಿಮೀಯ ರೀತಿಯಲ್ಲಿ ಯುವಕನ ಕಿಡ್ನ್ಯಾಪ್ ಯತ್ನ
ಹಾಡಹಗಲೇ ನಡುರಸ್ತೆಯಲ್ಲೇ ಸಿನಿಮೀಯ ರೀತಿಯಲ್ಲಿ ಯುವಕನ ಕಿಡ್ನ್ಯಾಪ್ ಯತ್ನ
ನಿಂಗೆ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗುತ್ತಿಲ್ಲ, ಅಲ್ವಾ.!
ನಿಂಗೆ 12 ಎಸೆತಗಳಲ್ಲಿ ಅರ್ಧಶತಕ ಪೂರೈಸಲು ಸಾಧ್ಯವಾಗುತ್ತಿಲ್ಲ, ಅಲ್ವಾ.!
ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಸಲಗ: ಪ್ರವಾಸಿಗರು ಸ್ವಲ್ಪರದಲ್ಲೇ ಪಾರು
ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಸಲಗ: ಪ್ರವಾಸಿಗರು ಸ್ವಲ್ಪರದಲ್ಲೇ ಪಾರು