IAF Group C Recruitment 2022: 10ನೇ ತರಗತಿ ಪಾಸಾದವರಿಗೆ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ

IAF Group C Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

IAF Group C Recruitment 2022: 10ನೇ ತರಗತಿ ಪಾಸಾದವರಿಗೆ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ
IAF Group C Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 03, 2022 | 4:16 PM

IAF Group C Recruitment 2022: ಭಾರತೀಯ ವಾಯುಪಡೆಯು ಗ್ರೂಪ್ C ವರ್ಗದ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಡಿಯಲ್ಲಿ ಕುಕ್, ಏರ್‌ಕ್ರಾಫ್ಟ್ ಮೆಕ್ಯಾನಿಕ್, ಮೆಸ್ ಸ್ಟಾಫ್, ಕಾರ್ಪೆಂಟರ್, ಸ್ಟೆನೋ, ಗ್ರೇಡ್-2, ಮಲ್ಟಿ ಟಾಸ್ಕಿಂಗ್ ಸ್ಟಾಫ್, ಸ್ಟೋರ್ ಕೀಪರ್, ಎಲ್‌ಡಿಸಿ, ಸಿಎಮ್‌ಟಿಡಿ ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಶೈಕ್ಷಣಿಕ ಅರ್ಹತೆ:

  • ಏರ್‌ಕ್ರಾಫ್ಟ್ ಮೆಕ್ಯಾನಿಕ್ – ಏರ್‌ಕ್ರಾಫ್ಟ್ ಮೆಕ್ಯಾನಿಕ್ ಟ್ರೇಡ್‌ನಲ್ಲಿ ಸರ್ಟಿಫಿಕೇಟ್ ಕೋರ್ಸ್‌ನೊಂದಿಗೆ 10 ನೇ ತರಗತಿ ಪಾಸ್ ಆಗಿರಬೇಕು. ಸಂಬಂಧಿತ ಕ್ಷೇತ್ರದಲ್ಲಿ ಒಂದು ವರ್ಷದ ಅನುಭವ ಹೊಂದಿರಬೇಕು.
  • ಕಾರ್ಪೆಂಟರ್ ಸ್ಕಿಲ್ಡ್ – ಕಾರ್ಪೆಂಟರ್ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರದೊಂದಿಗೆ 10 ನೇ ತರಗತಿ ಪಾಸ್ ಆಗಿರಬೇಕು. ಅಥವಾ ಕಾರ್ಪೆಂಟರ್ ರಿಗ್ಗರ್‌ನಂತಹ ವ್ಯಾಪಾರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
  • ಕುಕ್ – ಸರ್ಟಿಫಿಕೇಟ್ ಅಥವಾ ಕ್ಯಾಟರಿಂಗ್‌ನಲ್ಲಿ ಡಿಪ್ಲೊಮಾದೊಂದಿಗೆ 10 ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಒಂದು ವರ್ಷದ ಅನುಭವ ಹೊಂದಿರಬೇಕು.
  • ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್ – ಲೈಟ್ ಮತ್ತು ಹೆವಿ ವೆಹಿಕಲ್‌ನ ಸಿವಿಲ್ ಡ್ರೈವಿಂಗ್ ಲೈಸೆನ್ಸ್‌ನೊಂದಿಗೆ 10 ನೇ ತರಗತಿ ಪಾಸ್ ಆಗಿರಬೇಕು. ಹಾಗೆಯೇ ಕನಿಷ್ಠ ಎರಡು ವರ್ಷಗಳ ಅನುಭವ ಹೊಂದಿರಬೇಕು.
  • ಲೋವರ್ ಡಿವಿಷನ್ ಕ್ಲರ್ಕ್ – 12 ನೇ ತರಗತಿ ಪಾಸ್ ಆಗಿರಬೇಕು. ಕಂಪ್ಯೂಟರ್‌ನಲ್ಲಿ ನಿಮಿಷಕ್ಕೆ 35 ಪದಗಳ ಇಂಗ್ಲಿಷ್ ಟೈಪಿಂಗ್ ವೇಗ ಹೊಂದಿರಬೇಕು. ಜೊತೆಗೆ ಹಿಂದಿ ಟೈಪಿಂಗ್ ನಿಮಿಷಕ್ಕೆ ಕನಿಷ್ಠ 30 ಪದಗಳ ವೇಗ ಇರಬೇಕು.
  • ಸ್ಟೆನೋ ಗ್ರೇಡ್ II- 12ನೇ ತರಗತಿ ಪಾಸ್ ಆಗಿರಬೇಕು.
  • ಸ್ಟೋರ್‌ಕೀಪರ್- 10ನೇ ತರಗತಿ ಪಾಸ್ ಆಗಿರಬೇಕು.
  • ಮೆಸ್ ಸಿಬ್ಬಂದಿ- 10ನೇ ತರಗತಿ ಪಾಸ್ ಆಗಿರಬೇಕು.
  • MTS – 10ನೇ ತರಗತಿ ಪಾಸ್ ಆಗಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ನಂತರ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯ ಪ್ರಶ್ನೆಗಳು ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ: ಅಭ್ಯರ್ಥಿಗಳು ಅರ್ಜಿಯನ್ನು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಭರ್ತಿ ಮಾಡಬೇಕು. ಇದರೊಂದಿಗೆ ಇತ್ತೀಚಿನ ಸ್ವಯಂ ದೃಢೀಕರಿಸಿದ ಪಾಸ್‌ಪೋರ್ಟ್ ಫೋಟೋ ಜೊತೆಗೆ, ಅರ್ಜಿಯೊಂದಿಗೆ ವಿನಂತಿಸಿದ ದಾಖಲೆಗಳ ಸ್ವಯಂ ದೃಢೀಕರಿಸಿದ ಫೋಟೊಕಾಪಿಗಳನ್ನು ಸಹ ಕಳುಹಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಈ ನೇಮಕಾತಿ ಜಾಹೀರಾತು ಪ್ರಕಟವಾದ 30 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ? ಆಯಾ ಕೆಲಸಕ್ಕೆ ಆಯಾ ಕಮಾಂಡಿಂಗ್ ವಿಭಾಗದಲ್ಲಿ ನೇಮಕಾತಿ ನಡೆಯಲಿದೆ. ಅರ್ಜಿದಾರನು ಯಾವ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದಾರೊ, ಅದೇ ಹುದ್ದೆಯ ನೇಮಕಾತಿ ವಿಳಾಸಕ್ಕೆ ಅರ್ಜಿ ಕಳುಹಿಸಬೇಕು. ಅರ್ಜಿ ಕಳುಹಿಸಬೇಕಾದ ಎಲ್ಲಾ ವಿಳಾಸಗಳು ಇಲ್ಲಿದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ