IB Recruitment 2022: ಕೇಂದ್ರ ಗುಪ್ತಚರ ಸಂಸ್ಥೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Jul 06, 2022 | 3:25 PM

IB Recruitment 2022: ಈ ಹುದ್ದೆಗಳಿಗೆ ಡೆಪ್ಯುಟೇಶನ್ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

IB Recruitment 2022: ಕೇಂದ್ರ ಗುಪ್ತಚರ ಸಂಸ್ಥೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
IB Recruitment 2022
Follow us on

IB Recruitment 2022: ಕೇಂದ್ರ ಗುಪ್ತಚರ ಸಂಸ್ಥೆ (IB) ಯ ಹಲವು ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಭದ್ರತಾ ಸಹಾಯಕ, ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ, ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳು ಮತ್ತು ಹಲ್ವಾಯಿ ಕಮ್ ಕುಕ್ ಮತ್ತು ಕೇರ್‌ಟೇಕರ್ ಸೇರಿದಂತೆ 766 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಡೆಪ್ಯುಟೇಶನ್ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ I- 70 ಹುದ್ದೆಗಳು
  • ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ II- 350 ಹುದ್ದೆಗಳು
  • ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ I- 50 ಹುದ್ದೆಗಳು
  • ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ II- 100 ಹುದ್ದೆಗಳು
  • ಭದ್ರತಾ ಸಹಾಯಕ – 100 ಹುದ್ದೆಗಳು
  • ಜೂನಿಯರ್ ಇಂಟೆಲಿಜೆನ್ಸ್ (ಆಫೀಸರ್ ಮೋಟಾರ್ ಟ್ರಾನ್ಸ್‌ಪೋರ್ಟ್) I- 20 ಹುದ್ದೆಗಳು
  • ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (ಮೋಟಾರು ಸಾರಿಗೆ) II- 35 ಹುದ್ದೆಗಳು
  • ಭದ್ರತಾ ಸಹಾಯಕ (ಮೋಟಾರು ಸಾರಿಗೆ) – 20 ಹುದ್ದೆಗಳು
  • ಹಲ್ವಾಯಿ ಕಮ್ ಕುಕ್ – 9 ಹುದ್ದೆಗಳು
  • ಕೇರ್‌ಟೇಕರ್ – 5 ಹುದ್ದೆಗಳು
  • ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (ತಾಂತ್ರಿಕ) – 7 ಹುದ್ದೆಗಳು

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಯನ್ನು ಹೊಂದಿರಬೇಕು. ಭದ್ರತೆ ಅಥವಾ ಇಂಟೆಲಿಜೆನ್ಸ್‌ನಲ್ಲಿ 2 ವರ್ಷಗಳ ಅನುಭವವನ್ನೂ ಪಡೆದಿರಬೇಕು. ಇತರೆ ಅರ್ಹತಾ ಮಾನದಂಡಗಳ ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅಧಿಸೂಚನೆಯನ್ನು ಪರಿಶೀಲಿಸಬಹುದು.

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 56 ವರ್ಷಕ್ಕಿಂತ ಮೀರಿರಬಾರದು.

ವೇತನ:
ಈ ಹುದ್ದೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪೇ ಮ್ಯಾಟ್ರಿಕ್ಸ್ ಲೆವೆಲ್ 8 ರ ಅಡಿಯಲ್ಲಿ ತಿಂಗಳಿಗೆ ರೂ 47600 ರಿಂದ ರೂ 151100 ರವರೆಗಿನ ವೇತನವನ್ನು ನೀಡಲಾಗುತ್ತದೆ. ಆದರೆ, ಪೇ ಲೆವೆಲ್ 3 ಅಡಿಯಲ್ಲಿ ಸೆಕ್ಯುರಿಟಿ ಅಸಿಸ್ಟೆಂಟ್ ಮತ್ತು ಕುಕ್ ಹುದ್ದೆಗೆ ತಿಂಗಳಿಗೆ 21700 ರೂ.ನಿಂದ 69100 ರೂ. ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಆಫ್​ಲೈನ್​ ಮೋಡ್​ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಅಂದರೆ mha.gov.in ಭೇಟಿ ನೀಡಿ ಅರ್ಜಿ ಭರ್ತಿ ಮಾಡಿ ಅದನ್ನು ಅಂಚೆ ಮೂಲಕ ಕಳುಹಿಸಬೇಕಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:
the Assistant Director/G-3, Intelligence Bureau, Ministry of Home Affairs, 35 S P Marg, Bapu Dham, New Delhi-110021.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.