IBPS Clerk Exam 2025: IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯ ಹಾಲ್ ಟಿಕೆಟ್‌ ಬಿಡುಗಡೆ; ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ

IBPS ಕ್ಲರ್ಕ್ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 4 ರಿಂದ 11 ರವರೆಗೆ ನಡೆಯುವ ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳು ibps.in ವೆಬ್‌ಸೈಟ್‌ನಿಂದ ತಮ್ಮ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಬಹುದು. 10,277 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಪರೀಕ್ಷೆ CBT ಮೋಡ್‌ನಲ್ಲಿ ನಡೆಯಲಿದೆ. ಪ್ರವೇಶ ಪತ್ರದೊಂದಿಗೆ ಫೋಟೋ ಐಡಿ ಕಡ್ಡಾಯ.

IBPS Clerk Exam 2025: IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯ ಹಾಲ್ ಟಿಕೆಟ್‌ ಬಿಡುಗಡೆ; ಡೌನ್‌ಲೋಡ್ ಮಾಡುವ ವಿಧಾನ ಇಲ್ಲಿದೆ
Ibps Clerk Exam

Updated on: Sep 25, 2025 | 5:34 PM

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ನೋಂದಾಯಿತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡುವ ಮೂಲಕ ತಮ್ಮ ಹಾಲ್ ಟಿಕೆಟ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪರೀಕ್ಷೆಯು ಅಕ್ಟೋಬರ್ 4 ರಿಂದ ಅಕ್ಟೋಬರ್ 11 ರವರೆಗೆ ನಡೆಯಲಿದೆ. ಒಟ್ಟು 10,277 ಹುದ್ದೆಗಳಿಗೆ ನೇಮಕಾತಿಗಾಗಿ ಪರೀಕ್ಷೆಯನ್ನು ನಡೆಸಲಾಗುತ್ತದೆ . ನಂತರ ಯಶಸ್ವಿ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗುತ್ತಾರೆ.

IBPS ಕ್ಲರ್ಕ್ ಪೂರ್ವಭಾವಿ ಪರೀಕ್ಷೆಯು ಅಕ್ಟೋಬರ್ 4, 5 ಮತ್ತು 11 ರಂದು ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಆಯ್ಕೆಯನ್ನು ಮೂರು ಹಂತಗಳಲ್ಲಿ ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ವಿವಿಧ ಬ್ಯಾಂಕ್‌ಗಳಲ್ಲಿ ಕ್ಲರ್ಕ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಹಾಲ್ ಟಿಕೆಟ್‌ ಡೌನ್‌ಲೋಡ್ ಮಾಡುವುದು ಹೇಗೆ?

  • IBPSನ ಅಧಿಕೃತ ವೆಬ್‌ಸೈಟ್‌ಗೆ (ibps.in) ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಲಾದ ಕ್ಲರ್ಕ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಕಾರ್ಡ್ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಈಗ ನೋಂದಣಿ ಸಂಖ್ಯೆ ಇತ್ಯಾದಿಗಳನ್ನು ನಮೂದಿಸಿ ಮತ್ತು ಸಲ್ಲಿಸಿ.
  • ಹಾಲ್ ಟಿಕೆಟ್ ನಿಮ್ಮ ಸ್ಕ್ರೀನ್​ ಮೇಲೆ ಕಾಣಿಸುತ್ತದೆ. ಈಗ ಚೆಕ್​ ಮಾಡಿ ಡೌನ್‌ಲೋಡ್ ಮಾಡಿಕೊಳ್ಳಿ.

ಹಾಲ್ ಟಿಕೆಟ್‌ ಅಭ್ಯರ್ಥಿಯ ಹೆಸರು, ನೋಂದಣಿ ಸಂಖ್ಯೆ, ಪರೀಕ್ಷೆಯ ದಿನಾಂಕ ಮತ್ತು ಸಮಯ, ಪರೀಕ್ಷಾ ಕೇಂದ್ರದ ಹೆಸರು, ವರದಿ ಮಾಡುವ ಸಮಯ ಇತ್ಯಾದಿ ಸೇರಿದಂತೆ ಹಲವು ಪ್ರಮುಖ ಮಾಹಿತಿಯನ್ನು ಒಳಗೊಂಡಿರುತ್ತದೆ. ಪ್ರವೇಶ ಪತ್ರದ ಜೊತೆಗೆ, ನೀವು ಪರೀಕ್ಷಾ ಕೇಂದ್ರಕ್ಕೆ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿಯಂತಹ ಅಧಿಕೃತ ಫೋಟೋ ಐಡಿಯನ್ನು ತರಬೇಕು. ಜೊತೆಗೆ ಎರಡು ಪಾಸ್‌ಪೋರ್ಟ್ ಗಾತ್ರದ ಫೋಟೋ ಅಗತ್ಯ. ಆದರೆ ಮೊಬೈಲ್ ಫೋನ್‌, ಸ್ಮಾರ್ಟ್‌ವಾಚ್‌, ಕ್ಯಾಲ್ಕುಲೇಟರ್‌ಗಳು ಮತ್ತು ಬ್ಲೂಟೂತ್ ಸಾಧನಗಳಂತಹ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಹಾಲ್​ಗೆ ತರುವಂತಿಲ್ಲ.

ಇದನ್ನೂ ಓದಿ: ಸಹಕಾರಿ ಹಾಲು ಉತ್ಪಾದಕರ ಸಂಘದಲ್ಲಿ ನೇಮಕಾತಿ; ಪದವೀಧರರು ಕೂಡಲೇ ಅರ್ಜಿ ಸಲ್ಲಿಸಿ

CBT ಮೋಡ್‌ನಲ್ಲಿ ಪರೀಕ್ಷೆ:

ಕ್ಲರ್ಕ್ ಪೂರ್ವಭಾವಿ ಪರೀಕ್ಷೆಯನ್ನು CBT ಮೋಡ್‌ನಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಸುಮಾರು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಫಲಿತಾಂಶಗಳನ್ನು ಅಕ್ಟೋಬರ್-ನವೆಂಬರ್ ನಲ್ಲಿ ಘೋಷಿಸುವ ನಿರೀಕ್ಷೆಯಿದೆ. ಕ್ಲರ್ಕ್ ಮುಖ್ಯ ಪರೀಕ್ಷೆಯನ್ನು ನವೆಂಬರ್ 29 ರಂದು ನಿಗದಿಪಡಿಸಲಾಗಿದೆ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ