
ಪದವಿ ಪಡೆದ ನಂತರ ಬ್ಯಾಂಕ್ ಕೆಲಸಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ. ಐಬಿಪಿಎಸ್ ಬ್ಯಾಂಕ್ ಪಿಒ ನೇಮಕಾತಿಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಇಂದು ಜುಲೈ 1 ರಿಂದ ಪ್ರಾರಂಭವಾಗಲಿದ್ದು, ಜುಲೈ 27 ರವರೆಗೆ ಮುಂದುವರಿಯಲಿದೆ. ಆಸಕ್ತ ಅಭ್ಯರ್ಥಿಗಳು ibps.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್ ಮೋಡ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪಿಒ ಹುದ್ದೆಗಳಿಗೆ ಒಟ್ಟು 11 ಸರ್ಕಾರಿ ಬ್ಯಾಂಕ್‌ಗಳಲ್ಲಿ ನೇಮಕಾತಿ ನಡೆಯಲಿದೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ಬ್ಯಾಂಕ್ ಆಫ್ ಬರೋಡಾದಲ್ಲಿ 1000 ಪಿಒ ಹುದ್ದೆಗಳು, ಬ್ಯಾಂಕ್ ಆಫ್ ಇಂಡಿಯಾದಲ್ಲಿ 700 ಹುದ್ದೆಗಳು, ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 1000 ಹುದ್ದೆಗಳು, ಕೆನರಾ ಬ್ಯಾಂಕಿನಲ್ಲಿ 1000 ಹುದ್ದೆಗಳು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 500 ಹುದ್ದೆಗಳು, ಇಂಡಿಯನ್ ಓವರ್ಸೀಸ್ ಬ್ಯಾಂಕಿನಲ್ಲಿ 450 ಹುದ್ದೆಗಳು, ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 200 ಹುದ್ದೆಗಳು, ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ 358 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. ಅರ್ಜಿದಾರರ ವಯಸ್ಸು 20 ವರ್ಷದಿಂದ 30 ವರ್ಷಗಳ ನಡುವೆ ಇರಬೇಕು. ಗರಿಷ್ಠ ವಯೋಮಿತಿಯಲ್ಲಿ, ಒಬಿಸಿ ವರ್ಗಕ್ಕೆ 3 ವರ್ಷಗಳು, ಎಸ್‌ಸಿ ಮತ್ತು ಎಸ್‌ಟಿ 5 ವರ್ಷಗಳು ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ 10 ವರ್ಷಗಳು ಸಡಿಲಿಕೆ ನೀಡಲಾಗಿದೆ. ಅರ್ಜಿದಾರರ ವಯಸ್ಸನ್ನು ಜುಲೈ 1, 2025 ರಿಂದ ಲೆಕ್ಕಹಾಕಲಾಗುತ್ತದೆ.
ಇದನ್ನೂ ಓದಿ: ISRO Recruitment 2025: ನೀವು ಕೂಡ ಇಸ್ರೋದಲ್ಲಿ ವಿಜ್ಞಾನಿಯಾಗಲು ಬಯಸುವಿರಾ? ಹಾಗಿದ್ರೆ ತಕ್ಷಣ ಅರ್ಜಿ ಸಲ್ಲಿಸಿ
ಸಾಮಾನ್ಯ ಮತ್ತು ಒಬಿಸಿ ವರ್ಗದ ಅರ್ಜಿದಾರರು 850 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ, ಎಸ್‌ಟಿ ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು 175 ರೂ.ಗೆ ನಿಗದಿಪಡಿಸಲಾಗಿದೆ. ಶುಲ್ಕವನ್ನು ಆನ್‌ಲೈನ್ ಮೋಡ್‌ನಲ್ಲಿ ಪಾವತಿಸಬೇಕು.
ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ