IBPS RRB Recruitment 2022: ಬ್ಯಾಂಕಿಂಗ್ ಕ್ಷೇತ್ರದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
IBPS RRB Notification 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ನ ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
IBPS RRB Recruitment 2022: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಆಫೀಸರ್ ಸ್ಕೇಲ್-I (PO), ಆಫೀಸ್ ಅಸಿಸ್ಟೆಂಟ್- ಮಲ್ಟಿಪಲ್ (ಕ್ಲರ್ಕ್) ಮತ್ತು ಆಫೀಸರ್ ಸ್ಕೇಲ್ II ಮತ್ತು III ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ನ ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಕಚೇರಿ ಸಹಾಯಕ- 4483 ಹುದ್ದೆಗಳು
ಅಧಿಕಾರಿ ಸ್ಕೇಲ್ 1- 2676 ಹುದ್ದೆಗಳು
ಅಧಿಕಾರಿ ಸ್ಕೇಲ್ II- 842 ಹುದ್ದೆಗಳು
ಅಧಿಕಾರಿ ಸ್ಕೇಲ್ III- 80 ಹುದ್ದೆಗಳು
ಅರ್ಹತಾ ಮಾನದಂಡಗಳು: ಭಾರತದಲ್ಲಿನ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವುದೇ ಸ್ಟ್ರೀಮ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. RRB/s ಸೂಚಿಸಿದಂತೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ಹಾಗೆಯೇ ಆಯಾ ಹುದ್ದೆಗಳಿಗೆ ವಿದ್ಯಾರ್ಹತೆ ಕೂಡ ಬದಲಾಗಲಿದ್ದು, ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ವಿದ್ಯಾರ್ಹತೆಯನ್ನು ಪರಿಶೀಲಿಸಬಹುದು.
ವಯೋಮಿತಿ: ಕಚೇರಿ ಸಾಹಯಕ – 18 ವರ್ಷದಿಂದ 28 ವರ್ಷಗಳ ನಡುವಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಫೀಸರ್ ಸ್ಕೇಲ್-III (ಸೀನಿಯರ್ ಮ್ಯಾನೇಜರ್) – 21 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 40 ವರ್ಷಗಳೊಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಫೀಸರ್ ಸ್ಕೇಲ್-II (ಮ್ಯಾನೇಜರ್) – 21 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 32 ವರ್ಷಗಳೊಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಆಫೀಸರ್ ಸ್ಕೇಲ್ – I (ಸಹಾಯಕ ವ್ಯವಸ್ಥಾಪಕರು ) – 18 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 30 ವರ್ಷಗಳೊಗಿನವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 27, 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.