ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ನಲ್ಲಿ ಖಾಲಿ ಇರುವ 700ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.21 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡಿ ಅದರಲ್ಲಿ ಒದಗಿಸಲಾದ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. IBPS SO ನೇಮಕಾತಿಗೆ ಸಂಬಂಧಿಸಿದ ಪ್ರತಿಯೊಂದು ವಿವರಗಳು ಇಲ್ಲಿವೆ ನೋಡಿ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು
ಅರ್ಜಿ ಶುಲ್ಕ ವಿವರಗಳು
ಸಾಮಾನ್ಯ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಅರ್ಜಿ ಶುಲ್ಕ 850 ರೂ. ಆಗಿದ್ದು, ಎಸ್‌ಸಿ, ಎಸ್‌ಟಿ ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ 175 ರೂ. ಆಗಿದೆ. ಬ್ಯಾಂಕ್ ಆಫ್ ಬರೋಡಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಕೆನರಾ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಇಂಡಿಯನ್ ಓವರ್‌ಸೀಸ್, UCO ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಮತ್ತು ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಬ್ಯಾಂಕ್‌ನಲ್ಲಿ ನೇಮಕಾತಿಗಳನ್ನು ಮಾಡಲಾಗುತ್ತದೆ.
ವಯೋಮಿತಿ ಮಾಹಿತಿ
ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2022ರ ನವೆಂಬರ್ 1ಕ್ಕೆ 30 ವರ್ಷಗಳನ್ನು ಮೀರಿರಬಾರದು ಮತ್ತು 20 ವರ್ಷಗಳಿಗಿಂತ ಕಡಿಮೆಯಿರಬಾರದು. ವಿವಿಧ ಮೀಸಲಾತಿ ವರ್ಗಗಳು (SC, ST, OBC, Divyang, ಇತ್ಯಾದಿ) ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಗಳ ಪ್ರಕಾರ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಮತ್ತಷ್ಟು ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ