ICAR IARI Assistant Recruitment 2022: ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್ ಅಡಿಯಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ, ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳ ಅಧಿಕೃತ ವೆಬ್‌ಸೈಟ್ www.iari.res.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಕಂಪ್ಯೂಟರ್ ಪ್ರಾವೀಣ್ಯತೆ ಪರೀಕ್ಷೆಯ ಮೂಲಕ ಮಾಡಲಾಗುತ್ತದೆ. ಪ್ರಸ್ತುತ, ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ. ಅದರ ಪ್ರಕಾರ ಪ್ರಿಲಿಮ್ಸ್ ಅನ್ನು 25 ಜುಲೈ 2022 ರಂದು ನಡೆಸಬಹುದು. ಅದೇ ಸಮಯದಲ್ಲಿ, ಮುಖ್ಯ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ದಿನಾಂಕಗಳನ್ನು ನಂತರ ಬಿಡುಗಡೆ ಮಾಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 20 ವರ್ಷಗಳು ಹಾಗೂ ಗರಿಷ್ಠ ವಯಸ್ಸಿನ ಮಿತಿ 30 ವರ್ಷಗಳು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 21, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:04 pm, Wed, 1 June 22