ICMR NIIH Recruitment 2022: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತ ಸರ್ಕಾರ, ICMR-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಮ್ಯುನೊಹೆಮಾಟಾಲಜಿ (NIIH)ಸಂಶೋಧನಾ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಕುರಿತಾದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 6
ಹುದ್ದೆಗಳ ವಿವರ: ಸೈಟಿಂಸ್ಟ್, ಸಂಶೋಧನಾ ಸಹಾಯಕ ಹುದ್ದೆಗಳು
ವಯೋಮಿತಿ: ಅಭ್ಯರ್ಥಿಗಳು 35 ವರ್ಷಗಳನ್ನು ಮೀರಬಾರದು.
ವೇತನ ಶ್ರೇಣಿ: ತಿಂಗಳಿಗೆ 31,000 ರೂ.ನಿಂದ 51,000 ರೂ.
ಅರ್ಹತೆಗಳು:
ಸೈಂಟಿಸ್ಟ್ ಹುದ್ದೆಗಳಿಗೆ ಸಮಾನವಾದ ವಿಶೇಷತೆಯಲ್ಲಿ MBBS ಅಥವಾ MD ಪೂರ್ಣಗೊಳಿಸಿರಬೇಕು .
ಸಂಶೋಧನಾ ಸಹಾಯಕ ಹುದ್ದೆಗಳಿಗೆ ಪದವಿ ಅಥವಾ ತತ್ಸಮಾನ ವಿಶೇಷತೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು . ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.
ಆಯ್ಕೆ ವಿಧಾನ : ಅಂತಿಮ ಆಯ್ಕೆಯು ಶಾರ್ಟ್‌ಲಿಸ್ಟ್ / ಸಂದರ್ಶನವನ್ನು ಆಧರಿಸಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 22, 2022.
ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ .
ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್
ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ