ICSIL Recruitment 2022: ಐಸಿಎಸ್ಐಎಲ್ನಲ್ಲಿನ ಕ್ರೀಡಾ ಕೋಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ICSIL Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ICSIL Recruitment 2022: ಭಾರತ ಸರ್ಕಾರದ ಇಂಟೆಲಿಜೆಂಟ್ ಕಮ್ಯುನಿಕೇಷನ್ಸ್ ಸಿಸ್ಟಮ್ಸ್ ಇಂಡಿಯಾ ಲಿಮಿಟೆಡ್ (ICSIL)ನಲ್ಲಿ ಗುತ್ತಿಗೆ ಆಧಾರದ ಮೇಲೆ ಕೋಚ್, ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ಖಾಲಿ ಹುದ್ದೆಗಳ ಒಟ್ಟು ಸಂಖ್ಯೆ: 164
ಹುದ್ದೆಗಳ ಹೆಸರು: ಕೋಚ್, ಸಹಾಯಕ ಕೋಚ್ ಹುದ್ದೆಗಳು
ಕ್ರೀಡೆ: ಫುಟ್ಬಾಲ್, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಕಬಡ್ಡಿ, ಟೆನಿಸ್, ಬಾಸ್ಕೆಟ್ ಬಾಲ್, ಕಬಡ್ಡಿ, ಬಾಕ್ಸಿಂಗ್, ಕ್ರಿಕೆಟ್, ಬಾಲ್, ಟೇಬಲ್ ಟೆನ್ನಿಸ್ ಇತ್ಯಾದಿ.
ವಯೋಮಿತಿ: ಅಭ್ಯರ್ಥಿಗಳು 40 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.
ವೇತನ ಶ್ರೇಣಿ: ರೂ. ವೇತನ 46,374 ರಿಂದ 62,356 ರೂ.
ಅರ್ಹತೆಗಳು: ಕೋಚಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಐ/ಎನ್ಎಸ್ಎನ್ಐಎಸ್ ಅರ್ಹ ವಿಶ್ವವಿದ್ಯಾಲಯಗಳಿಂದ ಕೋಚಿಂಗ್ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಥವಾ ಒಲಿಂಪಿಕ್ಸ್ / ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪದಕ ಗೆದ್ದಿರಬೇಕು. ಹಾಗೆಯೇ ಸಂಬಂಧಿತ ಕೆಲಸದಲ್ಲಿ ಅನುಭವವನ್ನೂ ಹೊಂದಿರಬೇಕು.
ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಐ/ಎನ್ಎಸ್ಎನ್ಐಎಸ್ ಅರ್ಹ ವಿಶ್ವವಿದ್ಯಾಲಯಗಳಿಂದ ಕೋಚಿಂಗ್ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಅಥವಾ ಒಲಿಂಪಿಕ್ಸ್ / ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆ / ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತರಾಗಿದ್ದರೂ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 13, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:49 pm, Mon, 6 June 22