AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IDBI Bank Recruitment: ಪದವೀಧರರಿಗೆ ಸುವರ್ಣಾವಕಾಶ; IDBI ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) 1300 ಜೂನಿಯರ್ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವೀಧರರು ಮತ್ತು ಬ್ಯಾಂಕಿಂಗ್ ಅನುಭವವುಳ್ಳವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದವರಿಗೆ ವಾರ್ಷಿಕ ರೂ. 6.5 ಲಕ್ಷದವರೆಗೆ ವೇತನ ಸಿಗಲಿದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕೆಲಸ ಮಾಡಲು ಅವಕಾಶವಿದ್ದು, ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

IDBI Bank Recruitment: ಪದವೀಧರರಿಗೆ ಸುವರ್ಣಾವಕಾಶ; IDBI ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ
ಪದವೀಧರರಿಗೆ ಸುವರ್ಣಾವಕಾಶ
ಅಕ್ಷತಾ ವರ್ಕಾಡಿ
|

Updated on:Mar 10, 2026 | 12:29 PM

Share

ಬೆಂಗಳೂರು: ಭಾರತೀಯ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ (IDBI) ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ 1300 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘O’) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ ‘A’) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಪೈಕಿ 1100 ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹಾಗೂ 200 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ದೇಶದ ಪ್ರಮುಖ ನಗರಗಳಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ 75 ಹುದ್ದೆಗಳು ಲಭ್ಯವಿವೆ.  ಆಸಕ್ತ ಅಭ್ಯರ್ಥಿಗಳು ಮಾರ್ಚ್ 19 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು.

ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆಯನ್ನು ಒಳಗೊಂಡಿರುತ್ತದೆ. ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ ಶೇ. 60 ಅಂಕಗಳೊಂದಿಗೆ (SC/ST/ದಿವ್ಯಾಂಗರಿಗೆ 55%) ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಇನ್ನು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಪದವಿಯೊಂದಿಗೆ ಬ್ಯಾಂಕಿಂಗ್ ವಲಯದಲ್ಲಿ ಕನಿಷ್ಠ ಎರಡು ವರ್ಷಗಳ ಕೆಲಸದ ಅನುಭವ ಕಡ್ಡಾಯವಾಗಿದೆ.

ಇದನ್ನೂ ಓದಿ: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಸುವರ್ಣಾವಕಾಶ: 10th ಪಾಸಾಗಿದ್ರೆ ಸಾಕು!

ಮಾರ್ಚ್ 1, 2026 ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗಳು 20 ರಿಂದ 25 ವರ್ಷ ವಯಸ್ಸಿನವರಾಗಿರಬೇಕು (ಮೀಸಲಾತಿ ಅನ್ವಯ ವಯೋಮಿತಿ ಸಡಿಲಿಕೆ ಇದೆ). ಆಯ್ಕೆಯಾದವರಿಗೆ ವಾರ್ಷಿಕ ರೂ. 6.14 ಲಕ್ಷದಿಂದ ರೂ. 6.50 ಲಕ್ಷದವರೆಗೆ ವೇತನ ಸಿಗಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 1050 ಮತ್ತು ಮೀಸಲು ಅಭ್ಯರ್ಥಿಗಳಿಗೆ ರೂ. 250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಏಪ್ರಿಲ್ 12 ರಂದು ಆನ್‌ಲೈನ್ ಪರೀಕ್ಷೆಗಳು ನಡೆಯಲಿವೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಕೆಲಸ ಮಾಡಲು ಅವಕಾಶವಿದ್ದು, ಉದ್ಯೋಗಾಕಾಂಕ್ಷಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲಿಂಕ್​ ಕ್ಲಿಕ್​ ಮಾಡಿ: (Advertisement-Grade-O-2-year-exp-March072026)

ಅಧಿಕೃತ ವೆಬ್​ಸೈಟ್​​ ಲಿಂಕ್​ ಇಲ್ಲಿದೆ: idbi-bank-careers-current-openings.aspx

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 pm, Tue, 10 March 26

Follow Us