AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ

ಐಡಿಬಿಐ ಬ್ಯಾಂಕ್ ತಜ್ಞ ಅಧಿಕಾರಿ (Specialist Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 33 ಹುದ್ದೆಗಳಿದ್ದು, ಐಟಿ, ಭದ್ರತೆ, ಅಪಾಯ ನಿರ್ವಹಣೆ ಮತ್ತು ಆಡಿಟ್ ವಿಭಾಗಗಳಲ್ಲಿವೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 8 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 1,24,000 ರಿಂದ 1,97,000 ರೂ. ವರೆಗೆ ಆಕರ್ಷಕ ವೇತನ ಲಭ್ಯ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇದೊಂದು ಸುವರ್ಣಾವಕಾಶ.

IDBI Bank Recruitment 2026: ಆಕರ್ಷಕ ವೇತನದ ಜೊತೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಇಲ್ಲಿದೆ ಸುವರ್ಣಾವಕಾಶ
ಐಡಿಬಿಐ ಬ್ಯಾಂಕ್‌
ಅಕ್ಷತಾ ವರ್ಕಾಡಿ
|

Updated on:Mar 29, 2026 | 1:43 PM

Share

ಐಡಿಬಿಐ ಬ್ಯಾಂಕ್‌ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವನ್ನು ಒದಗಿಸುತ್ತಿದೆ. ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ತಜ್ಞ ಅಧಿಕಾರಿ (Specialist Officer) ಹುದ್ದೆಗಳ ಭರ್ತಿಗೆ ಬ್ಯಾಂಕ್ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಮೂಲಕ ಅವಕಾಶ ಕಲ್ಪಿಸಲಾಗಿದೆ.

ಒಟ್ಟು 33 ತಜ್ಞ ಅಧಿಕಾರಿ ಹುದ್ದೆಗಳಿಗಾಗಿ ಈ ನೇಮಕಾತಿ ನಡೆಯುತ್ತಿದ್ದು, ಇದರಲ್ಲಿ ಐಟಿ & ಎಂಐಎಸ್ ವಿಭಾಗಕ್ಕೆ 19 ಹುದ್ದೆಗಳು, ಭದ್ರತಾ ಅಧಿಕಾರಿ (ಗ್ರೇಡ್-ಡಿ) ವಿಭಾಗಕ್ಕೆ 8 ಹುದ್ದೆಗಳು, ಅಪಾಯ ನಿರ್ವಹಣೆ – ಮಾಹಿತಿ ವ್ಯವಸ್ಥೆ ವಿಭಾಗಕ್ಕೆ 4 ಹುದ್ದೆಗಳು ಹಾಗೂ ಆಡಿಟ್ – ಮಾಹಿತಿ ವ್ಯವಸ್ಥೆಗಳ (ಗ್ರೇಡ್-ಸಿ) ವಿಭಾಗಕ್ಕೆ 2 ಹುದ್ದೆಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 25 ರಿಂದಲೇ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಏಪ್ರಿಲ್ 8, 2026ರ ಒಳಗೆ ಐಡಿಬಿಐ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬೇಕಿದೆ.

ಅರ್ಹತಾ ಮಾನದಂಡಗಳ ಕುರಿತು ನೋಡುವುದಾದರೆ, ಐಟಿ ಮತ್ತು ಎಂಐಎಸ್ ಹುದ್ದೆಗಳಿಗೆ ಕಂಪ್ಯೂಟರ್ ಸೈನ್ಸ್, ಐಟಿ ಅಥವಾ ಎಲೆಕ್ಟ್ರಾನಿಕ್ಸ್‌ನಲ್ಲಿ ಪದವಿ ಪಡೆದಿರುವುದು ಕಡ್ಡಾಯವಾಗಿದ್ದು, ಸ್ನಾತಕೋತ್ತರ ಪದವೀಧರರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಅನುಭವದ ವಿಚಾರದಲ್ಲಿ, ಗ್ರೇಡ್ ಡಿ ಹುದ್ದೆಗೆ 10 ವರ್ಷ, ಗ್ರೇಡ್ ಸಿ ಗೆ 7 ವರ್ಷ ಮತ್ತು ಗ್ರೇಡ್ ಬಿ ಗೆ 4 ವರ್ಷಗಳ ವೃತ್ತಿ ಅನುಭವ ಅಗತ್ಯವಿರುತ್ತದೆ. ಇನ್ನು ಸೆಕ್ಯುರಿಟಿ ಆಫೀಸರ್ ಹುದ್ದೆಗೆ 12ನೇ ತರಗತಿ ಅಥವಾ ಡಿಪ್ಲೊಮಾ ವಿದ್ಯಾರ್ಹತೆಯೊಂದಿಗೆ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಕನಿಷ್ಠ 15 ವರ್ಷಗಳ ಕಾಲ ಜೆಸಿಒ ಆಗಿ ಸೇವೆ ಸಲ್ಲಿಸಿ ನಿವೃತ್ತರಾದವರು ಅರ್ಹರಾಗಿರುತ್ತಾರೆ. ಅಪಾಯ ನಿರ್ವಹಣೆ ಮತ್ತು ಆಡಿಟ್ ವಿಭಾಗದ ಹುದ್ದೆಗಳಿಗೆ ಸಂಬಂಧಿತ ತಾಂತ್ರಿಕ ಪದವಿ ಹಾಗೂ ನಿಗದಿಪಡಿಸಿದ ವರ್ಷಗಳ ವೃತ್ತಿ ಅನುಭವವನ್ನು ಕೇಳಲಾಗಿದೆ.

ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಉದ್ಯೋಗ ಪಡೆಯುವುದು ಹೇಗೆ? ಅರ್ಹತೆ ಮತ್ತು ಆಯ್ಕೆ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಇಲ್ಲಿದೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ರಿಂದ 45 ವರ್ಷದೊಳಗಿರಬೇಕು. ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕದ ವಿಚಾರವಾಗಿ, ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದವರಿಗೆ 1050 ರೂಪಾಯಿ ನಿಗದಿಪಡಿಸಲಾಗಿದ್ದು, ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಕೇವಲ 250 ರೂಪಾಯಿ ಶುಲ್ಕವಿರುತ್ತದೆ. ಆಯ್ಕೆ ಪ್ರಕ್ರಿಯೆಯು ಮೊದಲು ಅಭ್ಯರ್ಥಿಗಳ ಕಿರುಪಟ್ಟಿ (Shortlisting) ತಯಾರಿಸುವುದರೊಂದಿಗೆ ಆರಂಭವಾಗುತ್ತದೆ. ನಂತರ ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ, ದಾಖಲೆ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಗಳ ಮೂಲಕ ಅಂತಿಮ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,24,000 ರೂಪಾಯಿಯಿಂದ ಹಿಡಿದು 1,97,000 ರೂಪಾಯಿಯವರೆಗೆ ಆಕರ್ಷಕ ವೇತನ ದೊರೆಯಲಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಮತ್ತಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Sun, 29 March 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್