IDBI Executive Recruitment 2024 : ಐಡಿಬಿಐ ಬ್ಯಾಂಕ್‌’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿಯಿದ್ದು, ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಐಡಿಬಿಐ ಬ್ಯಾಂಕ್ 1000 ಎಕ್ಸಿಕ್ಯೂಟಿವ್-ಸೇಲ್ಸ್ ಅಂಡ್ ಆಪರೇಷನ್ಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಬ್ಯಾಂಕ್ ನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ, ವಯಸ್ಸು ಮತ್ತು ಸಂಬಳದ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ.

IDBI Executive Recruitment 2024 : ಐಡಿಬಿಐ ಬ್ಯಾಂಕ್‌’ನಲ್ಲಿ 1000 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 08, 2024 | 10:33 AM

ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಬ್ಯಾಂಕ್ ನಲ್ಲಿ ಒಟ್ಟು 1,000 ಹುದ್ದೆಗಳು ಖಾಲಿಯಿದ್ದು, ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕ್ ನಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ನವೆಂಬರ್ 16 ರೊಳಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

* ಸಂಸ್ಥೆಯ ಹೆಸರು : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ)

* ಹುದ್ದೆಯ ಹೆಸರು : ಎಕ್ಸಿಕ್ಯೂಟಿವ್- ಸೇಲ್ಸ್ ಹಾಗೂ ಆಪರೇಷನ್ಸ್

* ಖಾಲಿಯಿರುವ ಹುದ್ದೆಗಳು : 1000

* ಸಂಬಳ ಮೊದಲ ವರ್ಷ – ತಿಂಗಳಿಗೆ ರೂ 29000.

* ಎರಡನೇ ವರ್ಷ- ರೂ 31,300

ವಯಸ್ಸಿನ ಮಿತಿ

* ಕನಿಷ್ಠ ವಯಸ್ಸು: 20 ವರ್ಷಗಳು

* ಗರಿಷ್ಠ ವಯಸ್ಸು: 25 ವರ್ಷಗಳು

* ಸರ್ಕಾರದ ಮಾನದಂಡಗಳ ಪ್ರಕಾರ ಒಬಿಸಿ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ

* ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು.

* ಅಭ್ಯರ್ಥಿಯು ಕಂಪ್ಯೂಟರ್ ಗಳ ಕೆಲಸದ ಜ್ಞಾನವನ್ನು ಹೊಂದಿರಬೇಕು.

* ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ಆಧಾರ್ ಕಾರ್ಡ್, ಎಸ್ಎಸ್ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ಭಾವಚಿತ್ರ ಇನ್ನಿತ್ತರ ದಾಖಲೆಗಳನ್ನು ನೀಡುವುದು ಕಡ್ಡಾಯ.

ಆಯ್ಕೆ ಪ್ರಕ್ರಿಯೆ

* ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಹಾಗೂ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ: ಕರ್ನಾಟಕ ಲೋಕಾಯುಕ್ತದಲ್ಲಿ 30 ಕ್ಲರ್ಕ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಅರ್ಜಿ ಶುಲ್ಕ

* ಸಾಮಾನ್ಯ ಅರ್ಹತೆ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1050 ಹಾಗೂ ಎಸ್‌ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.250. ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

ಪ್ರಮುಖ ದಿನಾಂಕಗಳು

* ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 07-11-2024

* ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 16-11-2024

* ಆನ್ ಲೈನ್ ಪರೀಕ್ಷೆ ದಿನಾಂಕ: 01-12-2024

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
Video: ಜಾರ್ಖಂಡ್​ನಲ್ಲಿ ಬಸ್ ಪಲ್ಟಿ, 7 ಮಂದಿ ಸಾವು
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರೋದು ಒಂದು ಯು-ಟರ್ನ್ ಸರ್ಕಾರ: ಬೊಮ್ಮಾಯಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲೋದು: ಕುಮಾರಸ್ವಾಮಿ
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
6,6,6,6,6,6,6,6: ಸಿಕ್ಸರ್​ಗಳ ಸುರಿಮಳೆ, 8 ಎಸೆತಗಳಲ್ಲಿ 8 ಸಿಕ್ಸ್​
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಬೈಂದೂರಲ್ಲಿ ಲ್ಯಾಂಡ್ ಆದ ಬಳಿಕ ಶಿವಕುಮಾರ್​ಗೆ ಶೆಡ್ಯೂಲ್ ಮರೆತುಹೋಯಿತೇ?
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಯಾರದ್ದೋ ಪಿಂಚಣಿ ಹಣ, ಇನ್ನಯಾರದ್ದೋ ಖಾತೆಗೆ ಜಮೆ: ವೃದ್ಧ ದಂಪತಿ ಕಣ್ಣೀರು
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಕೇವಲ 2 ತಿಂಗಳು ಹಿಂದೆ ಚಿಕ್ಕಬಳ್ಳಾಪುರದಿಂದ ಟ್ರಾನ್ಸ್​ಫರ್ ಆಗಿರುವ ಅಧಿಕಾರಿ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ