IDBI Recruitment 2022: ಐಡಿಬಿಐ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ: ಡಿಗ್ರಿ ಮಾಡಿದವರು ಅರ್ಜಿ ಸಲ್ಲಿಸಿ

IDBI Recruitment 2022: ಈ ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನಗಳು ಈ ಕೆಳಗಿನಂತಿವೆ.

IDBI Recruitment 2022: ಐಡಿಬಿಐ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ: ಡಿಗ್ರಿ ಮಾಡಿದವರು ಅರ್ಜಿ ಸಲ್ಲಿಸಿ
IDBI Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 01, 2022 | 4:53 PM

IDBI Recruitment 2022: ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಕಾರ್ಯನಿರ್ವಾಹಕ (Executives) ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಗ್ರೇಡ್ ಎ (Assistant Manager) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಧಿಸೂಚನೆಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳು: 1544

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುದ್ದೆಗಳು: ಕಾರ್ಯನಿರ್ವಾಹಕ ಹುದ್ದೆಗಳು: 1044 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು: 500

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 1, 2022 ರ ವೇಳೆಗೆ 20 ರಿಂದ 28 ವರ್ಷ ವಯಸ್ಸಿನವರಾಗಿರಬೇಕು.

ವಿದ್ಯಾರ್ಹತೆಗಳು: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಕೇವಲ ಡಿಪ್ಲೊಮಾ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರುವುದನ್ನು ಅರ್ಹತೆಯ ಮಾನದಂಡವೆಂದು ಪರಿಗಣಿಸಲಾಗುವುದಿಲ್ಲ.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ (ಆನ್‌ಲೈನ್) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ ವಿಧಾನ: ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ. ಈ ವೇಳೆ ಒಟ್ಟು 200 ಅಂಕಗಳಿಗೆ 200 ಪ್ರಶ್ನೆಗಳನ್ನು ನೀಡಲಾಗಿರುತ್ತದೆ. ಇದಕ್ಕೆ 2 ಗಂಟೆಗಳ ಅವಧಿಯಲ್ಲಿ ಮಾರ್ಕಿಂಗ್​ ಮೂಲಕ ಉತ್ತರಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: 1000 ರೂ. SC / ST / PWD ಅಭ್ಯರ್ಥಿಗಳಿಗೆ: 200 ರೂ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: ಜೂನ್ 3, 2022. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 17, 2022. ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ: ಜುಲೈ 9, 2022. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಯ ದಿನಾಂಕ: ಜುಲೈ 23, 2022.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.