IDBI SO Recruitment 2023: ಬ್ಯಾಂಕಿಂಗ್ ಕ್ಷೇತ್ರದ 228 ಹುದ್ದೆಗಳಿಗೆ ಅರ್ಜಿ ಆಹ್ವಾನ
IDBI SO Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IDBI ಯ ಅಧಿಕೃತ ವೆಬ್ಸೈಟ್ idbibank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
IDBI SO Recruitment 2023: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IDBI ಯ ಅಧಿಕೃತ ವೆಬ್ಸೈಟ್ idbibank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಯ ಪ್ರಕಾರ, ಐಡಿಬಿಐ ಗ್ರೂಪ್ ಬಿ, ಸಿ ಮತ್ತು ಡಿ ಸೇರಿದಂತೆ ಒಟ್ಟು 228 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಮ್ಯಾನೇಜರ್ (ಗ್ರೇಡ್ B): 75 ಹುದ್ದೆಗಳು
- ಸಹಾಯಕ ಜನರಲ್ ಮ್ಯಾನೇಜರ್ (AGM) (ಗ್ರೇಡ್ C) – 29 ಹುದ್ದೆಗಳು
- ಡೆಪ್ಯುಟಿ ಜನರಲ್ ಮ್ಯಾನೇಜರ್ (DGM) (ಗ್ರೇಡ್ D) – 10 ಹುದ್ದೆಗಳು
- ಡಿಜಿಟಲ್ ಬ್ಯಾಂಕಿಂಗ್ ಮತ್ತು ಎಮರ್ಜಿಂಗ್ ಪಾವತಿಗಳು (DB&EP) – 51 ಹುದ್ದೆಗಳು
- ಮಾಹಿತಿ ತಂತ್ರಜ್ಞಾನ ಮತ್ತು MIS (IT & MIS)- 63 ಹುದ್ದೆಗಳು
- ಒಟ್ಟು ಹುದ್ದೆಗಳ ಸಂಖ್ಯೆ: 228
ಅರ್ಹತಾ ಮಾನದಂಡಗಳು:
ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಈ ಬಗ್ಗೆಗಿನ ಸಂಪೂರ್ಣ ವಿವರಗಳನ್ನು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ವಯೋಮಿತಿ:
- ಉಪ ಜನರಲ್ ಮ್ಯಾನೇಜರ್ (DGM) (ಗ್ರೇಡ್ D): 35 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಸಹಾಯಕ ಜನರಲ್ ಮ್ಯಾನೇಜರ್ (AGM): 28 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ವಯಸ್ಸಿನ ಮಿತಿ (ಗ್ರೇಡ್ C): 28 ಮತ್ತು 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಮ್ಯಾನೇಜರ್ ಗ್ರೇಡ್ ಬಿ: 25 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ
ಅರ್ಜಿ ಶುಲ್ಕ:
- Gen/OBC/EWS ಗಾಗಿ ಅರ್ಜಿ ಶುಲ್ಕ: ರೂ.1000
- SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ.200
ಪ್ರಮುಖ ದಿನಾಂಕ:
- ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ- ಫೆಬ್ರವರಿ 21, 2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 3, 2023
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಫೆಬ್ರವರಿ 21 ರಿಂದ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು .
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.