IDBI SO Recruitment 2023: ಬ್ಯಾಂಕಿಂಗ್ ಕ್ಷೇತ್ರದ 228 ಹುದ್ದೆಗಳಿಗೆ ಅರ್ಜಿ ಆಹ್ವಾನ

| Updated By: ಝಾಹಿರ್ ಯೂಸುಫ್

Updated on: Feb 16, 2023 | 2:34 PM

IDBI SO Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IDBI ಯ ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

IDBI SO Recruitment 2023: ಬ್ಯಾಂಕಿಂಗ್ ಕ್ಷೇತ್ರದ 228 ಹುದ್ದೆಗಳಿಗೆ ಅರ್ಜಿ ಆಹ್ವಾನ
IDBI SO Recruitment 2023
Follow us on

IDBI SO Recruitment 2023: ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (IDBI) ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IDBI ಯ ಅಧಿಕೃತ ವೆಬ್‌ಸೈಟ್ idbibank.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಅಧಿಸೂಚನೆಯ ಪ್ರಕಾರ, ಐಡಿಬಿಐ ಗ್ರೂಪ್ ಬಿ, ಸಿ ಮತ್ತು ಡಿ ಸೇರಿದಂತೆ ಒಟ್ಟು 228 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಮ್ಯಾನೇಜರ್ (ಗ್ರೇಡ್ B): 75 ಹುದ್ದೆಗಳು
  • ಸಹಾಯಕ ಜನರಲ್ ಮ್ಯಾನೇಜರ್ (AGM) (ಗ್ರೇಡ್ C) – 29 ಹುದ್ದೆಗಳು
  • ಡೆಪ್ಯುಟಿ ಜನರಲ್ ಮ್ಯಾನೇಜರ್ (DGM) (ಗ್ರೇಡ್ D) – 10 ಹುದ್ದೆಗಳು
  • ಡಿಜಿಟಲ್ ಬ್ಯಾಂಕಿಂಗ್ ಮತ್ತು ಎಮರ್ಜಿಂಗ್ ಪಾವತಿಗಳು (DB&EP) – 51 ಹುದ್ದೆಗಳು
  • ಮಾಹಿತಿ ತಂತ್ರಜ್ಞಾನ ಮತ್ತು MIS (IT & MIS)- 63 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ: 228

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯಾ ಹುದ್ದೆಗಳಿಗೆ ವಿಭಿನ್ನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದ್ದು, ಈ ಬಗ್ಗೆಗಿನ ಸಂಪೂರ್ಣ ವಿವರಗಳನ್ನು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.

ವಯೋಮಿತಿ:

  • ಉಪ ಜನರಲ್ ಮ್ಯಾನೇಜರ್ (DGM) (ಗ್ರೇಡ್ D): 35 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಸಹಾಯಕ ಜನರಲ್ ಮ್ಯಾನೇಜರ್ (AGM): 28 ರಿಂದ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ವಯಸ್ಸಿನ ಮಿತಿ (ಗ್ರೇಡ್ C): 28 ಮತ್ತು 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
  • ಮ್ಯಾನೇಜರ್ ಗ್ರೇಡ್ ಬಿ: 25 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಶುಲ್ಕ:

  • Gen/OBC/EWS ಗಾಗಿ ಅರ್ಜಿ ಶುಲ್ಕ: ರೂ.1000
  • SC/ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: ರೂ.200

ಪ್ರಮುಖ ದಿನಾಂಕ:

  • ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ- ಫೆಬ್ರವರಿ 21, 2023
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 3, 2023

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಫೆಬ್ರವರಿ 21 ರಿಂದ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು .

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.