AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IKEA Recruitment 2022: ಬೆಂಗಳೂರು ಐಕಿಯದಲ್ಲಿದೆ ಸ್ಥಳೀಯರಿಗೆ ಉದ್ಯೋಗಾವಕಾಶ

IKEA Recruitment 2022: ಈಗಾಗಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅದರಂತೆ 1000 ನೌಕರರಲ್ಲಿ ಶೆ.72 ರಷ್ಟು ಸ್ಥಳೀಯ ಉದ್ಯೋಗಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ.

IKEA Recruitment 2022: ಬೆಂಗಳೂರು ಐಕಿಯದಲ್ಲಿದೆ ಸ್ಥಳೀಯರಿಗೆ ಉದ್ಯೋಗಾವಕಾಶ
IKEA Recruitment 2022
TV9 Web
| Edited By: |

Updated on: Jun 27, 2022 | 1:07 PM

Share

ಬೆಂಗಳೂರಿನಲ್ಲಿ ನೂತನವಾಗಿ ಆರಂಭಗೊಂಡಿರುವ ಸ್ಪೀಡನ್​ ಮೂಲದ ಪಿಠೋಪಕರಣಗಳ ಮಳಿಗೆ ಐಕಿಯ (IKEA Bengaluru) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈಗಾಗಲೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಅದರಂತೆ 1000 ನೌಕರರಲ್ಲಿ ಶೆ.72 ರಷ್ಟು ಸ್ಥಳೀಯ ಉದ್ಯೋಗಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಕಂಪೆನಿ ತಿಳಿಸಿದೆ. ಇದೀಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತಿದೆ. ಹೀಗಾಗಿ ಆಯ್ಕೆ ಪ್ರಕ್ರಿಯೆಯು ಯಾವಾಗ ಬೇಕಿದ್ದರೂ ಕೊನೆಗೊಳ್ಳಬಹುದು. ಏಕೆಂದರೆ ನಿರ್ದಿಷ್ಟ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಸಂಪೂರ್ಣ ಭರ್ತಿ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಸಂದರ್ಶನವನ್ನು ಕೊನೆಗೊಳಿಸಲಾಗುತ್ತಿದೆ. ಹೀಗಾಗಿ ಇಂದೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ಹೆಸರು:

  • ಹುದ್ದೆಗಳು
  • ಸಪ್ಲೈ ಪ್ಲಾನರ್​​, ಜವಳಿ ಕಾರ್ಪೆಟ್​​ಗಳು
  • ಸಪ್ಲೈ ಪ್ಲಾನರ್, ಜವಳಿ ಉತ್ಪನ್ನಗಳು
  • ಸಪ್ಲೈ ಪ್ಲಾನರ್, ವರ್ಗ ಪ್ರದೇಶ -ಮೆಟಲ್​​, ಪ್ಲಾಸ್ಟಿಕ್, ಫ್ಲೋಟ್ ಗ್ಲಾಸ್ ಮತ್ತು ಎಲೆಕ್ಟ್ರಾನಿಕ್ಸ್
  • ಪ್ರಾಜೆಕ್ಟ್ ಲೀಡರ್ (ವಿಸ್ತರಣೆ ಲಾಜಿಸ್ಟಿಕ್ಸ್)
  • ಉತ್ಪನ್ನ ಅನುಸರಣೆ ತಜ್ಞ
  • ಮಲ್ಟಿಚಾನಲ್ ನೆಟ್‌ವರ್ಕ್ ಪ್ರಾಜೆಕ್ಟ್ ಮ್ಯಾನೇಜರ್
  • ಹಿರಿಯ ಸೈಬರ್ ಇಂಜಿನಿಯರ್
  • ಸೈಬರ್ ಇಂಜಿನಿಯರ್
  • ಸರ್ವಿಸ್​ ಫುಲ್​ಫಿಲ್​ಮೆಂಟ್​​ ಆಪರೇಷನ್​ ಡೆವಲಪರ್
  • ಮಾರಾಟ ಸಹೋದ್ಯೋಗಿ (ಮೂಲ ತಂಡ)
  • ಪಬ್ಲಿಕ್​ ರಿಲೇಷನ್​​ ಲೀಡರ್​​
  • ಉತ್ತರಾಧಿಕಾರ ಯೋಜನೆ ತಜ್ಞ
  • ಸೇವಾ ವ್ಯಾಪಾರ ವಸಾಹತು ಜೂನಿಯರ್ ಸ್ಪೆಷಲಿಸ್ಟ್
  • ಗೂಡ್ಸ್ ಫ್ಲೋ ಟೀಮ್ ಲೀಡರ್ – ವಿಆರ್ ಮಾಲ್
  • SSS ತಂಡ-ನಾಯಕ – VR ಮಾಲ್

ವಿದ್ಯಾರ್ಹತೆ: ಆಯಾ ಹುದ್ದೆಗಳಿಗೆ ಅನುಸಾರವಾಗಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಹಾಗೆಯೇ ಇಂಗ್ಲಿಷ್​ನಲ್ಲಿ ಮಾತನಾಡುವ ಮತ್ತು ಬರೆಯುವ ಸಾಮರ್ಥ್ಯವನ್ನು ಹೊಂದಿರಬೇಕು. ಇದರ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕಾಗುತ್ತದೆ ಎಂದು ತಿಳಿಸಲಾಗಿದೆ. ವಿದ್ಯಾರ್ಹತೆ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಅಧಿಸೂಚನೆ ಪರಿಶೀಲಿಸಿ.

ಅರ್ಜಿ ಸಲ್ಲಿಸುವುದು ಹೇಗೆ: ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ಮೂಲಕ ಆಯಾ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ: ಈ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 15, 2022.

ಈ ನೇಮಕಾತಿ ಕುರಿತಾದ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಹಾಗೆಯೇ ಕಂಪೆನಿಯ ವೆಬ್​ಸೈಟ್ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ