Income Tax Recruitment 2023: 10ನೇ ತರಗತಿ ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

|

Updated on: Feb 22, 2023 | 2:29 PM

Income Tax Recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆ ಅಧಿಕೃತ ವೆಬ್‌ಸೈಟ್‌ incometaxbengaluru.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

Income Tax Recruitment 2023: 10ನೇ ತರಗತಿ ಪಾಸಾದವರಿಗೆ ಆದಾಯ ತೆರಿಗೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
Income Tax Recruitment 2023
Follow us on

Income Tax Recruitment 2023: ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವವರಿಗೆ ಇಲ್ಲಿದೆ ಸಿಹಿ ಸುದ್ದಿ. ಆದಾಯ ತೆರಿಗೆ ಇಲಾಖೆಯು ಕರ್ನಾಟಕ ಮತ್ತು ಗೋವಾ ರಾಜ್ಯಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಇನ್‌ಸ್ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್, ಎಂಟಿಎಸ್ ಹುದ್ದೆಗಳು ಸೇರಿದಂತೆ ಒಟ್ಟು 71 ಪೋಸ್ಟ್​ಗಳನ್ನು ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆ ಅಧಿಕೃತ ವೆಬ್‌ಸೈಟ್‌ incometaxbengaluru.org ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ – 10 ಹುದ್ದೆಗಳು
  • ಸಹಾಯಕ ತೆರಿಗೆ ಅಧಿಕಾರಿ – 32 ಹುದ್ದೆಗಳು
  • MTS – 29 ಹುದ್ದೆಗಳು
  • ಒಟ್ಟು ಹುದ್ದೆಗಳ ಸಂಖ್ಯೆ- 71

ಅರ್ಹತಾ ಮಾನದಂಡಗಳು:

ಇದನ್ನೂ ಓದಿ
Income Tax Recruitment 2023: ಸರ್ಕಾರಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
AIASL Recruitment 2023: ಏರ್​ ಇಂಡಿಯಾ ನೇಮಕಾತಿ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Karnataka Post Office Recruitment 2023: ಕರ್ನಾಟಕ ಅಂಚೆ ಇಲಾಖೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ
SBI Recruitment 2023: ಎಸ್​ಬಿಐ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
  • ಸಹಾಯಕ ತೆರಿಗೆ ಅಧಿಕಾರಿ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
  • MTS – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಪ್ರಮುಖ ದಿನಾಂಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 24, 2023

ವಯೋಮಿತಿ:

  • ಆದಾಯ ತೆರಿಗೆ ಇನ್ಸ್‌ಪೆಕ್ಟರ್ – 18 ರಿಂದ 30 ವರ್ಷಗಳು
  • ಸಹಾಯಕ ತೆರಿಗೆ ಅಧಿಕಾರಿ – 18 ರಿಂದ 27 ವರ್ಷಗಳು
  • MTS – 18 ರಿಂದ 25 ವರ್ಷಗಳು

ಅರ್ಜಿ ಶುಲ್ಕ:

  • ಸಾಮಾನ್ಯ / OBC ವರ್ಗದ ಅಭ್ಯರ್ಥಿಗಳಿಗೆ- ರೂ 100 / –
  • ಮಹಿಳಾ / ST / SC / PWD / ಮಾಜಿ ಸೈನಿಕರಿಗೆ- ಯಾವುದೇ ಅರ್ಜಿ ಶುಲ್ಕವಿಲ್ಲ.

ಇದನ್ನೂ ಓದಿ: HMT Recruitment 2023: HMT ನೇಮಕಾತಿ: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅರ್ಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮತ್ತು ನೋಂದಾಯಿತ ಪೋಸ್ಟ್ ಅಥವಾ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Commissioner of Income Tax (Admin and TPS), O/o Principal Chief Commissioner of Income Tax, Karnataka and Goa Region, Central Revenue Building, No. 1, Queens Road, Bengaluru, Karnataka- 560001

ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.