India Post GDS Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: May 02, 2022 | 10:26 PM

India Post GDS Recruitment 2022: ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 40 ವರ್ಷಕ್ಕಿಂತ ಹೆಚ್ಚಿರಬಾರದು.

India Post GDS Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
India Post GDS Recruitment 2022
Follow us on

India Post GDS Recruitment 2022: ಅಂಚೆ ಇಲಾಖೆಯಲ್ಲಿ ಉದ್ಯೋಗವವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದೆಎ ಅಂಚೆ ಇಲಾಖೆಯು 10ನೇ ತರಗತಿ ಉತ್ತೀರ್ಣರಾದವರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯನ್ನು ದೇಶದಾದ್ಯಂತ ಗ್ರಾಮೀಣ ಅಂಚೆ ಕಚೇರಿಗಳಲ್ಲಿ ಅಂಚೆ ಇಲಾಖೆಯಿಂದ ಮಾಡಲಾಗುತ್ತದೆ. ಒಟ್ಟು 38926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದಕ್ಕಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ 2, 2022 ರಿಂದ ಶುರುವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 5, 2022. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

India Post GDS Recruitment 2022: ವಿದ್ಯಾರ್ಹತೆ:
ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಕಡಿಮೆಯಿರಬಾರದು ಮತ್ತು 40 ವರ್ಷಕ್ಕಿಂತ ಹೆಚ್ಚಿರಬಾರದು. ಕಾಯ್ದಿರಿಸಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಭಾರತ ಸರ್ಕಾರದ ನಿಯಮಗಳ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 100 ರೂ. ಪಾವತಿಸಬೇಕಾಗುತ್ತದೆ.

ವೇತನ:
ಬಿಪಿಎಂ – ರೂ.12,000/-
ABPM/ಡಾಕ್ ಸೇವಕ್ – ರೂ.10,000/-

ಪ್ರಮುಖ ದಿನಾಂಕ:
ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 5, 2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.