India Post Recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಇದಕ್ಕಾಗಿ ಅಂಚೆ ಇಲಾಖೆಯು ಮೆಕ್ಯಾನಿಕ್, MV ಎಲೆಕ್ಟ್ರಿಷಿಯನ್, ಕಾಪರ್ ಮತ್ತು ಟಿನ್‌ಮಿತ್ ಮತ್ತು ಅಪ್ಹೋಲ್‌ಸ್ಟರರ್ ಸೇರಿದಂತೆ ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಪ್ರಮಾಣಪತ್ರ ಹೊಂದಿರಬೇಕು. ಇದಲ್ಲದೆ, ಮಾನ್ಯವಾದ ಚಾಲನಾ ಪರವಾನಗಿ (HMV) ಸಹ ಇರಬೇಕಾಗುತ್ತದೆ.
ಈ ಹುದ್ದೆಗಳಿಗೆ 18 ವರ್ಷದಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ರೂ. 100/- ರೂ ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವಾಗಿ ರೂ. 19900 ರಿಂದ ರೂ. 63200 ನೀಡಲಾಗುತ್ತದೆ.
ಇದನ್ನೂ ಓದಿ: Central Railway Recruitment 2022: 2422 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ಕ್ಲಾಸ್ ಪಾಸ್ ಆದವರಿಗೆ ಉದ್ಯೋಗಾವಕಾಶ
ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜನವರಿ 9, 2023
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
Published On - 2:21 pm, Sat, 24 December 22