India Post Office Recruitment 2023: ಅಂಚೆ ಇಲಾಖೆ ನೇಮಕಾತಿ: SSLC, PUC ಪಾಸಾದವರಿಗೆ ಸುವರ್ಣಾವಕಾಶ
India Post Office Recruitment 2023: ಈ ಬಾರಿ ಪೋಸ್ಟ್ಮ್ಯಾನ್, ಮೇಲ್ ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
India Post Office Recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ನೀವು ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಅಂಚೆ ಇಲಾಖೆಯು 2023 ರಲ್ಲಿ ಹಲವು ಹುದ್ದೆಗಳ ನೇಮಕಾತಿ ನಡೆಸಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿ ಪೋಸ್ಟ್ಮ್ಯಾನ್, ಮೈಲ್ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಿದ್ದು, ಶೀಘ್ರದಲ್ಲೇ ಈ ಕುರಿತಾದ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.
ಹುದ್ದೆಗಳ ವಿವರಗಳು:
- ಪೋಸ್ಟ್ಮ್ಯಾನ್- 59,099 ಹುದ್ದೆಗಳು
- ಮೈಲ್ಗಾರ್ಡ್- 1,445 ಹುದ್ದೆಗಳು
- ಮಲ್ಟಿ ಟಾಸ್ಕಿಂಗ್ (MTS)- 37,539 ಹುದ್ದೆಗಳು
- ಒಟ್ಟು ಹುದ್ದೆಗಳು- 98,083 ಹುದ್ದೆಗಳು
ಕರ್ನಾಟಕದಲ್ಲೂ ಉದ್ಯೋಗಾವಕಾಶ:
ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿ 3887 ಪೋಸ್ಟ್ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೆಯೇ 90 ಮೈಲ್ಗಾರ್ಡ್ ಹಾಗೂ 1754 ಮಲ್ಟಿ ಟಾಸ್ಕಿಂಗ್ (MTS) ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು.
ಅರ್ಹತಾ ಮಾನದಂಡಗಳು:
ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪಾಸಾಗಿರುವ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
ವಯೋಮಿತಿ:
ಈ ಉದ್ಯೋಗಗಳಿಗೆ ಕನಿಷ್ಠ 18 ರಿಂದ ಗರಿಷ್ಠ 32 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್ನಲ್ಲಿದೆ ಉದ್ಯೋಗಾವಕಾಶ
ವಿಶೇಷ ಸೂಚನೆ: ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು ಈ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಈ ಪ್ರಕಟಣೆಯ ಬಳಿಕವಷ್ಟೇ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಗಳು ಲಭ್ಯವಾಗಲಿದೆ.
ಈ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapost.gov.in ಗೆ ಭೇಟಿ ನೀಡಬಹುದು.
Published On - 3:14 pm, Thu, 5 January 23