India Post Office Recruitment 2023: ಅಂಚೆ ಇಲಾಖೆ ನೇಮಕಾತಿ: SSLC, PUC ಪಾಸಾದವರಿಗೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Jan 05, 2023 | 3:14 PM

India Post Office Recruitment 2023: ಈ ಬಾರಿ ಪೋಸ್ಟ್‌ಮ್ಯಾನ್, ಮೇಲ್ ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಶೀಘ್ರದಲ್ಲೇ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

India Post Office Recruitment 2023: ಅಂಚೆ ಇಲಾಖೆ ನೇಮಕಾತಿ: SSLC, PUC ಪಾಸಾದವರಿಗೆ ಸುವರ್ಣಾವಕಾಶ
India Post Office Recruitment 2023
Follow us on

India Post Office Recruitment 2023: ಭಾರತೀಯ ಅಂಚೆ ಇಲಾಖೆಯಲ್ಲಿ ನೀವು ಉದ್ಯೋಗವನ್ನು ಎದುರು ನೋಡುತ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಅಂಚೆ ಇಲಾಖೆಯು 2023 ರಲ್ಲಿ ಹಲವು ಹುದ್ದೆಗಳ ನೇಮಕಾತಿ ನಡೆಸಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿ ಪೋಸ್ಟ್‌ಮ್ಯಾನ್,  ಮೈಲ್​ಗಾರ್ಡ್ ಮತ್ತು ಇತರ ಹಲವು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಿದ್ದು, ಶೀಘ್ರದಲ್ಲೇ ಈ ಕುರಿತಾದ ಅಧಿಸೂಚನೆ ಬಿಡುಗಡೆಯಾಗಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಪೋಸ್ಟ್​ಮ್ಯಾನ್- 59,099 ಹುದ್ದೆಗಳು
  • ಮೈಲ್​ಗಾರ್ಡ್​- 1,445 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ (MTS)- 37,539 ಹುದ್ದೆಗಳು
  • ಒಟ್ಟು ಹುದ್ದೆಗಳು- 98,083 ಹುದ್ದೆಗಳು

ಕರ್ನಾಟಕದಲ್ಲೂ ಉದ್ಯೋಗಾವಕಾಶ:

ಇದನ್ನೂ ಓದಿ
HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ
BSNL Recruitment 2023: 11,705 ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 40 ಸಾವಿರ ರೂ.
NHAI Recruitment 2023: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ: 56 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ
UPSC Recruitment 2023: ಕೇಂದ್ರ ಗುಪ್ತಚರ ಇಲಾಖೆಯಲ್ಲಿದೆ ಉದ್ಯೋಗಾವಕಾಶ

ಈ ನೇಮಕಾತಿ ಅಡಿಯಲ್ಲಿ ಕರ್ನಾಟಕದಲ್ಲಿ 3887 ಪೋಸ್ಟ್​ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೆಯೇ 90 ಮೈಲ್​ಗಾರ್ಡ್ ಹಾಗೂ 1754 ಮಲ್ಟಿ ಟಾಸ್ಕಿಂಗ್ (MTS) ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು.

ಅರ್ಹತಾ ಮಾನದಂಡಗಳು:

ಶೈಕ್ಷಣಿಕ ಅರ್ಹತೆ: ಈ ಹುದ್ದೆಗಳಿಗೆ ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪಾಸಾಗಿರುವ ಯಾವುದೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: HAL Recruitment 2023: 10ನೇ ತರಗತಿ ಪಾಸಾದವರಿಗೆ HAL ನಲ್ಲಿದೆ ಉದ್ಯೋಗಾವಕಾಶ

ವಯೋಮಿತಿ:

ಈ ಉದ್ಯೋಗಗಳಿಗೆ ಕನಿಷ್ಠ 18 ರಿಂದ ಗರಿಷ್ಠ 32 ವರ್ಷದವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇದನ್ನೂ ಓದಿ: Karnataka Bank Recruitment 2023: ಪದವೀಧರರಿಗೆ ಕರ್ನಾಟಕ ಬ್ಯಾಂಕ್​ನಲ್ಲಿದೆ ಉದ್ಯೋಗಾವಕಾಶ

ವಿಶೇಷ ಸೂಚನೆ: ಈ ನೇಮಕಾತಿಯ ಅಧಿಕೃತ ಅಧಿಸೂಚನೆಯು ಈ ವಾರದಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಈ ಪ್ರಕಟಣೆಯ ಬಳಿಕವಷ್ಟೇ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಗಳು ಲಭ್ಯವಾಗಲಿದೆ.

ಈ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡಬಹುದು.

 

 

 

Published On - 3:14 pm, Thu, 5 January 23