India Post Payments Bank: ಗ್ರಾಮೀಣ ಡಾಕ್ ಸೇವಕ್ ಹುದ್ದೆ: ವೇತನ 30 ಸಾವಿರ ರೂ.

India Post Payments Bank Recruitment 2022: ವಿವಿಧ ರಾಜ್ಯಗಳಲ್ಲಿ ಒಟ್ಟು 650 ಹುದ್ದೆಗಳನ್ನು ಈ ನೇಮಕಾತಿ ಅಭಿಯಾನದ ಮೂಲಕ ಭರ್ತಿ ಮಾಡಲಾಗುತ್ತದೆ.

India Post Payments Bank: ಗ್ರಾಮೀಣ ಡಾಕ್ ಸೇವಕ್ ಹುದ್ದೆ: ವೇತನ 30 ಸಾವಿರ ರೂ.
IPPB Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 11, 2022 | 10:41 PM

India Post Payments Bank: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ India Post Payments Bank (IPPB) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಮೂಲಕ ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ippbonline.com ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇದರ ಹೊರತಾಗಿ ಯಾವುದೇ ಇತರ ವಿಧಾನಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಒಟ್ಟು ಹುದ್ದೆಗಳು: ವಿವಿಧ ರಾಜ್ಯಗಳಲ್ಲಿ ಒಟ್ಟು 650 ಹುದ್ದೆಗಳನ್ನು ಈ ನೇಮಕಾತಿ ಅಭಿಯಾನದ ಮೂಲಕ ಭರ್ತಿ ಮಾಡಲಾಗುತ್ತದೆ. ಹೀಗೆ ಆಯ್ಕೆಯಾದ ಅಭ್ಯರ್ಥಿಗಳು ಬೇರೆ ಬೇರೆ ಕಾರ್ಯಗಳಿಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನೇಮಕಗೊಳ್ಳುವವರು.

ವೇತನ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 30000 ವರೆಗೆ ವೇತನವನ್ನು ನೀಡಲಾಗುತ್ತದೆ.

ಇದನ್ನೂ ಓದಿ
Image
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
Image
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Image
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು . ಅಲ್ಲದೆ, ಅಭ್ಯರ್ಥಿಯು ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ 20 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು: ಆನ್‌ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 20, 2022 ಪರೀಕ್ಷೆಯ ದಿನಾಂಕ – ಜೂನ್, 2022

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ