India Post Payments Bank: ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ India Post Payments Bank (IPPB) ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಮೂಲಕ ದೇಶಾದ್ಯಂತ ಬ್ಯಾಂಕ್ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ippbonline.com ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇದರ ಹೊರತಾಗಿ ಯಾವುದೇ ಇತರ ವಿಧಾನಗಳ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಒಟ್ಟು ಹುದ್ದೆಗಳು:
ವಿವಿಧ ರಾಜ್ಯಗಳಲ್ಲಿ ಒಟ್ಟು 650 ಹುದ್ದೆಗಳನ್ನು ಈ ನೇಮಕಾತಿ ಅಭಿಯಾನದ ಮೂಲಕ ಭರ್ತಿ ಮಾಡಲಾಗುತ್ತದೆ. ಹೀಗೆ ಆಯ್ಕೆಯಾದ ಅಭ್ಯರ್ಥಿಗಳು ಬೇರೆ ಬೇರೆ ಕಾರ್ಯಗಳಿಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನೇಮಕಗೊಳ್ಳುವವರು.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹ 30000 ವರೆಗೆ ವೇತನವನ್ನು ನೀಡಲಾಗುತ್ತದೆ.
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಪದವಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು . ಅಲ್ಲದೆ, ಅಭ್ಯರ್ಥಿಯು ಕನಿಷ್ಠ 2 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ 20 ರಿಂದ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 20, 2022
ಪರೀಕ್ಷೆಯ ದಿನಾಂಕ – ಜೂನ್, 2022
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.