India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ
India Post Recruitment 2022: 10ನೇ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಯು ವಾಹನ ಚಾಲನೆಯಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.
India Post Recruitment 2022: ಭಾರತೀಯ ಅಂಚೆ ಇಲಾಖೆಯ ಮಧುರೈ ವಿಭಾಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು 17 ಮೇ 2022 ರೊಳಗೆ ಸಲ್ಲಿಸಬೇಕಾಗಿದೆ. ಇದಕ್ಕಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
India Post Recruitment 2022: ಒಟ್ಟು ಹುದ್ದೆಗಳು: ನೇಮಕಾತಿಗಾಗಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ ಒಟ್ಟು 4 ಖಾಲಿ ಹುದ್ದೆಗಳನ್ನು ಈ ಮೂಲಕ ಭರ್ತಿ ಮಾಡಲಾಗುತ್ತದೆ. ಇದರಲ್ಲಿ ವಿವಿಧ ವಿಭಾಗದಿಂದ ತಲಾ ಒಂದು ಹುದ್ದೆಯ ನೇಮಕಾತಿ ನಡೆಯಲಿದೆ. ಪೋಸ್ಟ್‌ಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮ್ಯಾಟ್ರಿಕ್ಸ್ ಲೆವೆಲ್ 2 ರ ಅಡಿಯಲ್ಲಿ ವೇತನ ಶ್ರೇಣಿಯನ್ನು ನೀಡಲಾಗುತ್ತದೆ.
India Post Recruitment 2022: ವಿದ್ಯಾರ್ಹತೆ: 10ನೇ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಯು ವಾಹನ ಚಾಲನೆಯಲ್ಲಿ 3 ವರ್ಷಗಳ ಅನುಭವವನ್ನು ಹೊಂದಿರಬೇಕು.
India Post Recruitment 2022: ವಯೋಮಿತಿ: ಗರಿಷ್ಠ 56 ವರ್ಷವರೆಗಿನವರೆಗೂ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
India Post Recruitment 2022: ಅರ್ಜಿ ಸಲ್ಲಿಸುವುದು ಹೇಗೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಧಿಸೂಚನೆಯಲ್ಲಿ ನೀಡಲಾದ ನಮೂನೆಯಲ್ಲಿ ಭರ್ತಿ ಮಾಡಬೇಕು ಮತ್ತು ಅದನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. The Senior Manager, Mail Motor Service, Tallakulam, Madurai-625002.
ನೇಮಕಾತಿಯ ಅಧಿಸೂಚನೆ ಮತ್ತು ಇತರ ಮಾಹಿತಿಗಾಗಿ, ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡಬಹುದು.