India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Jun 27, 2022 | 3:34 PM

India Post Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

India Post Recruitment 2022: 10ನೇ ತರಗತಿ ಪಾಸಾದವರಿಗೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗಾವಕಾಶ
India Post Recruitment 2022
Follow us on

India Post Recruitment 2022: ಭಾರತೀಯ ಅಂಚೆ ಇಲಾಖೆಯು (India Post Recruitment 2022) ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್‌ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ಆಗಿದೆ. ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಇನ್ನಷ್ಟು ಮಾಹಿತಿ ಈ ಕೆಳಗಿನಂತಿವೆ.

ಖಾಲಿ ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ- 24

ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಂದರೆ ಎಸ್​ಎಸ್​ಎಲ್​ಸಿ ಪಾಸಾದ, ಡ್ರೈವಿಂಗ್ ಲೈಸನ್ಸ್ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಅಂಚೆ ಇಲಾಖೆಯ ಡ್ರೈವರ್​ ಹುದ್ದೆಗಳಿಗೆ 56 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2022 ರಂದು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್​ ಅನ್ನು ಕ್ಲಿಕ್ ಮಾಡುವ ನೇರವಾಗಿ ಅರ್ಜಿ ಸಲ್ಲಿಸಬಹುದು. ಹಾಗೆಯೇ ಅರ್ಜಿಯನ್ನು ಡೌನ್​ಲೋಡ್ ಮಾಡಿ ಭರ್ತಿ ಮಾಡುವ ಮೂಲಕ ಅಂಚೆ ಮೂಲಕ ಕಳುಹಿಸಿಕೊಡಬಹುದು. ಅಂಚೆಯ ಮೂಲಕ ಅರ್ಜಿ ಕಳಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:
The Senior Manager (JAG), Mail Motor Service, No. 37, Greams Road, Chennai- 600006.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.