India Post recruitment 2022: ಅಂಚೆ ಇಲಾಖೆಯಲ್ಲಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

| Updated By: ಝಾಹಿರ್ ಯೂಸುಫ್

Updated on: May 28, 2022 | 3:42 PM

India Post recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

India Post recruitment 2022: ಅಂಚೆ ಇಲಾಖೆಯಲ್ಲಿ ಉದ್ಯೋಗ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
India Post recruitment 2022
Follow us on

India Post recruitment 2022: ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಂಚೆ ಇಲಾಖೆಯ ಅಧಿಕೃತ ವೆಬ್​ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ – 38,926

ಅರ್ಹತಾ ಮಾನದಂಡಗಳು:
ಅಭ್ಯರ್ಥಿಯು ಭಾರತ ಸರ್ಕಾರ / ರಾಜ್ಯ ಸರ್ಕಾರಗಳು / ಕೇಂದ್ರಾಡಳಿತ ಪ್ರದೇಶಗಳಿಂದ ಗುರುತಿಸಲ್ಪಟ್ಟ ಯಾವುದೇ ಶಾಲಾ ಶಿಕ್ಷಣ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಅಭ್ಯರ್ಥಿಯು ಸ್ಥಳೀಯ ಭಾಷೆಯ ಜ್ಞಾನವನ್ನು ಹೊಂದಿರಬೇಕು.

ಇದನ್ನೂ ಓದಿ
HAL Recruitment: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ನಲ್ಲಿದೆ ಉದ್ಯೋಗಾವಕಾಶ
IOCL recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ONGC Recruitment 2022: ಒಎನ್​ಜಿಸಿಯ 3600 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು

ವೇತನ:
ಬಿಪಿಎಂ – ರೂ.12,000/-
ಎಬಿಪಿಎಂ/ಡಾಕ್ ಸೇವಕ್ – ರೂ.10,000/-

ಅರ್ಜಿ ಶುಲ್ಕ:
ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು ರೂ. 100/- ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಸಿಸ್ಟಮ್ ರಚಿಸಿದ ಮೆರಿಟ್ ಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.