India Post recruitment 2022: 10ನೇ ತರಗತಿ ಪಾಸ್ ಆಗಿದ್ದೀರಾ? ಹಾಗಿದ್ರೆ ಅಂಚೆ ಇಲಾಖೆಯಲ್ಲಿದೆ ಉದ್ಯೋಗ
India Post recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
India Post recruitment 2022: ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಏಕೆಂದರೆ ಅಂಚೆ ಇಲಾಖೆಯ ಬೆಂಗಳೂರು ಸರ್ಕಲ್ ವ್ಯಾಪ್ತಿಯಲ್ಲಿ ಮೋಟಾರ್ ಮೇಲ್ ಸೇವೆಯ ಅಡಿಯಲ್ಲಿ ಡ್ರೈವರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್‌ನ ಅಧಿಕೃತ ವೆಬ್‌ಸೈಟ್ indiapost.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು: ಒಟ್ಟು ಹುದ್ದೆಗಳ ಸಂಖ್ಯೆ- 19
ಅರ್ಹತಾ ಮಾನದಂಡಗಳು: ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಮಾನ್ಯ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ವಯೋಮಿತಿ: ಈ ಹುದ್ದೆಗಳಿಗೆ 18 ವರ್ಷದಿಂದ 27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮಾಸಿಕ ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 19,900 ರೂ. ವೇತನವಾಗಿ ನೀಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 26, 2022
ಆಯ್ಕೆ ಪ್ರಕ್ರಿಯೆ ಹೇಗೆ? ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ವಾಹನ ಚಾಲನಾ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ? ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಗಳನ್ನು ಡೌನ್ ಮಾಡಿಕೊಳ್ಳಬಹುದು. ಅಲ್ಲದೆ ಈ ಅರ್ಜಿಯನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.
ಅರ್ಜಿ ಕಳುಹಿಸಬೇಕಾದ ವಿಳಾಸ: The Manager, Mail Motor Service, Bengaluru- 560001.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.