Indian Air Force Recruitment 2022: ಭಾರತೀಯ ವಾಯುಪಡೆಯು (IAF) ಏರ್ ಫೋರ್ಸ್ ರೆಕಾರ್ಡ್ ಆಫೀಸ್‌ನಲ್ಲಿ ಲೋವರ್ ಡಿವಿಷನ್ ಕ್ಲರ್ಕ್ (LDC) ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ವಾಯುಪಡೆಯ ಅಧಿಕೃತ ವೆಬ್ಸೈಟ್ indianairforce.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತಂತೆ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.
ಹುದ್ದೆಗಳ ವಿವರಗಳು:
ಲೋವರ್ ಡಿವಿಷನ್ ಕ್ಲರ್ಕ್ (LDC)- 4 ಹುದ್ದೆಗಳು
ಅರ್ಹತಾ ಮಾನದಂಡಗಳು:
ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಂಪ್ಯೂಟರ್‌ನಲ್ಲಿ ಇಂಗ್ಲಿಷ್‌ನಲ್ಲಿ ನಿಮಿಷಕ್ಕೆ 35 ಪದಗಳು ಅಥವಾ ಹಿಂದಿಯಲ್ಲಿ ನಿಮಿಷಕ್ಕೆ 30 ಪದಗಳ ಟೈಪಿಂಗ್ ವೇಗವನ್ನು ಹೊಂದಿರುವುದು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳಿಗೆ: ಕನಿಷ್ಠ 18 ವರ್ಷಗಳು – ಗರಿಷ್ಠ 25 ವರ್ಷಗಳು
OBC: ಕನಿಷ್ಠ 18 – ಗರಿಷ್ಠ 28 ವರ್ಷಗಳು
SC / ST: ಕನಿಷ್ಠ 18 – ಗರಿಷ್ಠ 30 ವರ್ಷಗಳು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 20, 2022
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.