Indian Army Recruitment 2022: SSLC ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ
Indian Army Artillery Recruitment 2022: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯ ಶೇಕಡಾವಾರು ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಪ್ರತಿಭಾ ಪರೀಕ್ಷೆಯ ಮೂಲಕ ಆಯ್ಕೆ ಮಾಡುತ್ತದೆ.
ಭಾರತೀಯ ಸೇನೆಯ ನಾಸಿಕ್ನಲ್ಲಿರುವ ಇಂಡಿಯನ್ ಆರ್ಮಿ ಫಿರಂಗಿದಳದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನೇಮಕಾತಿ ಪ್ರಕಟಣೆ ಹೊರಡಿಸಿದೆ. ಕುಕ್, ಫೈರ್‌ಮ್ಯಾನ್ ಸೇರಿದಂತೆ ಒಟ್ಟು 107 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 22ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರ ಈ ಕೆಳಗಿನಂತಿವೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು. ಇಲ್ಲಿ ಆಯಾ ಹುದ್ದೆಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಈ ಹುದ್ದೆಗಳಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೆಯೇ ಗರಿಷ್ಠ ವಯೋಮಿತಿ 25 ವರ್ಷ ದಾಟಿರಬಾರದು. ಇದಾಗ್ಯೂ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 28 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ: ಲೆವೆಲ್-1, ಲೆವೆಲ್-2 ಪೇ ಮೆಟ್ರಿಕ್ಸ್ ಆಧಾರದಲ್ಲಿ ರೂ.19,000 ರಿಂದ 63,000 ವರೆಗೆ ತಿಂಗಳ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯ ಶೇಕಡಾವಾರು ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಪ್ರತಿಭಾ ಪರೀಕ್ಷೆಯ ಮೂಲಕ ಆಯ್ಕೆ ಮಾಡುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: 30-12-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-01-2022
ಅರ್ಜಿ ಸಲ್ಲಿಸುವ ವಿಧಾನ?
ಅಭ್ಯರ್ಥಿಗಳು indianarmy.nic.in ನೀಡಲಾದ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದು ಅದರಲ್ಲಿ ಕೇಳಲಾದ ಮಾಹಿತಿಗಳನ್ನು ನಮೂದಿಸಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಳುಹಿಸಬೇಕು. ಅಂದಹಾಗೆ ವಿಳಾಸವನ್ನು ಇಂಗ್ಲಿಷ್‌ನಲ್ಲಿ ಬರೆಯಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Commandant
Headquarters
Artillery Centre
Nasik Road Camp PIN-422102′
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ