ಭಾರತೀಯ ಸೇನೆಯ ನಾಸಿಕ್ನಲ್ಲಿರುವ ಇಂಡಿಯನ್ ಆರ್ಮಿ ಫಿರಂಗಿದಳದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳನೇಮಕಾತಿ ಪ್ರಕಟಣೆ ಹೊರಡಿಸಿದೆ. ಕುಕ್, ಫೈರ್‌ಮ್ಯಾನ್ ಸೇರಿದಂತೆ ಒಟ್ಟು 107 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜನವರಿ 22ರ ಒಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ವಿವರ ಈ ಕೆಳಗಿನಂತಿವೆ.
ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಾಸ್ ಮಾಡಿರಬೇಕು. ಇಲ್ಲಿ ಆಯಾ ಹುದ್ದೆಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಈ ಹುದ್ದೆಗಳಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಹಾಗೆಯೇ ಗರಿಷ್ಠ ವಯೋಮಿತಿ 25 ವರ್ಷ ದಾಟಿರಬಾರದು. ಇದಾಗ್ಯೂ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 30 ವರ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 28 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನ: ಲೆವೆಲ್-1, ಲೆವೆಲ್-2 ಪೇ ಮೆಟ್ರಿಕ್ಸ್ ಆಧಾರದಲ್ಲಿ ರೂ.19,000 ರಿಂದ 63,000 ವರೆಗೆ ತಿಂಗಳ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರ ವಿದ್ಯಾರ್ಹತೆಯ ಶೇಕಡಾವಾರು ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಆ ಬಳಿಕ ಆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಪ್ರತಿಭಾ ಪರೀಕ್ಷೆಯ ಮೂಲಕ ಆಯ್ಕೆ ಮಾಡುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ: 30-12-2021
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22-01-2022
ಅರ್ಜಿ ಸಲ್ಲಿಸುವ ವಿಧಾನ?
ಅಭ್ಯರ್ಥಿಗಳು indianarmy.nic.in ನೀಡಲಾದ ಅರ್ಜಿ ನಮೂನೆಯನ್ನು ಪ್ರಿಂಟ್ ತೆಗೆದು ಅದರಲ್ಲಿ ಕೇಳಲಾದ ಮಾಹಿತಿಗಳನ್ನು ನಮೂದಿಸಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಂಚೆ ಮೂಲಕ ಕಳುಹಿಸಬೇಕು. ಅಂದಹಾಗೆ ವಿಳಾಸವನ್ನು ಇಂಗ್ಲಿಷ್‌ನಲ್ಲಿ ಬರೆಯಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ :
The Commandant
Headquarters
Artillery Centre
Nasik Road Camp PIN-422102′
ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ