ಭಾರತೀಯ ಸೇನೆಯ ಡಿಜಿ ಇಎಂಇನಲ್ಲಿ ಖಾಲಿಯಿರುವ 625 ಗ್ರೂಪ್ ಸಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Indian Army DG EME Group C Recruitment 2024: ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ ನಿರ್ದೇಶನಾಲಯವು ಖಾಲಿಯಿರುವ 625 ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಇದರಡಿಯಲ್ಲಿ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲರ್ಕ್, ಫೈರ್ ಮ್ಯಾನ್, ಫೈಟರ್ ಮತ್ತು ವೆಹಿಕಲ್ ಮೆಕ್ಯಾನಿಕ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿಯಿದ್ದು ಆಸಕ್ತರು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅದಕ್ಕೂ ಮುನ್ನ ಹುದ್ದೆಗಳ ವಿವರ, ವೇತನ ಶ್ರೇಣಿ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ಶುಲ್ಕ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ ನಿರ್ದೇಶನಾಲಯವು 625 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರೂಪ್ ಸಿ ವೃಂದದ ಹುದ್ದೆಗಳಾದ ಫಾರ್ಮಸಿಸ್ಟ್, ಲೋವರ್ ಡಿವಿಶನ್ ಕ್ಲರ್ಕ್, ಫೈರ್ ಮ್ಯಾನ್, ವೆಹಿಕಲ್ ಮೆಕ್ಯಾನಿಕ್ ಸೇರಿದಂತೆ ಇನ್ನಿತ್ತರ ಹುದ್ದೆಗಳು ಖಾಲಿಯಿದೆ. ಉದ್ಯೋಗದ ಹುಡುಕಾಟದಲ್ಲಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಜನವರಿ 9, 2025 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಉದ್ಯೋಗ ವಿವರಗಳು
* ಇಲಾಖೆ ಹೆಸರು : ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್(DGEME)
* ಹುದ್ದೆಗಳ ಹೆಸರು: ಫಾರ್ಮಾಸಿಸ್ಟ್, ಲೋವರ್ ಡಿವಿಷನ್ ಕ್ಲರ್ಕ್, ಎಲೆಕ್ಟ್ರಿಷಿಯನ್ ಹೈಲಿ ಸ್ಕಿಲ್ಡ್-II, ಅಗ್ನಿಶಾಮಕ ಸಿಬ್ಬಂದಿ, ಟ್ರೇಡ್ಸ್‌ಮ್ಯಾನ್ ಮೇಟ್, ವೆಹಿಕಲ್ ಮೆಕ್ಯಾನಿಕ್
* ಒಟ್ಟು ಹುದ್ದೆಗಳು :625
* ಉದ್ಯೋಗ ಸ್ಥಳ : ಭಾರತಾದ್ಯಂತ
ಶೈಕ್ಷಣಿಕ ವಿದ್ಯಾರ್ಹತೆ
ಭಾರತೀಯ ಸೇನೆಯ ಡೈರೆಕ್ಟರೇಟ್ ಜನರಲ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಇಂಜಿನಿಯರ್ಸ್ ನಿರ್ದೇಶನಾಲಯದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಎಸ್ ಎಸ್ ಎಲ್ ಸಿ, ಪಿಯುಸಿ, ಬಿಎಸ್ಸಿ ಹಾಗೂ ಡಿಪ್ಲೋಮ ಪದವಿಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ವಯೋಮಿತಿ
* ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
* ಮೀಸಲಾತಿ ಅನುಸಾರವಾಗಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಹಾಗೂ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 15 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ವಿಧಾನ
* ಲಿಖಿತ ಪರೀಕ್ಷೆ
* ದಾಖಲೆ ಪರಿಶೀಲನೆ
* ದೈಹಿಕ ಸಾಮರ್ಥ್ಯ ಪರೀಕ್ಷೆ
* ಸಂದರ್ಶನ
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 21 ಡಿಸೆಂಬರ್ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 9 ಜನವರಿ 2025
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ