Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Army MNS Recruitment 2022: ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

Indian Army MNS Recruitment 2022: ಭಾರತೀಯ ಸೇನೆಯ ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Army MNS Recruitment 2022
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 07, 2022 | 10:30 PM

Indian Army MNS Recruitment 2022: ಭಾರತೀಯ ಸೇನೆಯು ಮಿಲಿಟರಿ ನರ್ಸಿಂಗ್ ಸೇವಾ ನೇಮಕಾತಿ (MNS) ಪ್ರಕಟಣೆ ಹೊರಡಿಸಿದೆ. ಮಿಲಿಟರಿ ನರ್ಸಿಂಗ್ ಸೇವಾ ನೇಮಕಾತಿ ಪರೀಕ್ಷೆ 2022 ರ ಮೂಲಕ, ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಯ ನಾಲ್ಕು ವರ್ಷಗಳ B.Sc ನರ್ಸಿಂಗ್ ಕೋರ್ಸ್‌ಗೆ ಪ್ರವೇಶವನ್ನು ಮಾಡಲಾಗುತ್ತದೆ. ಕೋರ್ಸ್ ಅನ್ನು ಪೂರ್ಣಗೊಳಿಸಿದ ನಂತರ, ನೀವು ಭಾರತೀಯ ಸೇನೆಯ ಮಿಲಿಟರಿ ನರ್ಸಿಂಗ್ ಸೇವೆಯಲ್ಲಿ ಶಾಶ್ವತ ಅಥವಾ ಅಲ್ಪ ಸೇವಾ ಅವಕಾಶವನ್ನು ಪಡೆಯುತ್ತೀರಿ. ಮಿಲಿಟರಿ ನರ್ಸಿಂಗ್ ಸೇವಾ ನೇಮಕಾತಿ 2022 ರ ಅರ್ಜಿ ಪ್ರಕ್ರಿಯೆಯು ಮೇ 11 ರಿಂದ ಪ್ರಾರಂಭವಾಗಲಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ವೆಬ್‌ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಹತಾ ಮಾನದಂಡಗಳು: – ಅವಿವಾಹಿತರು/ವಿಚ್ಛೇದಿತರು/ಕಾನೂನುಬದ್ಧವಾಗಿ ಬೇರ್ಪಟ್ಟ ಅಥವಾ ವಿಧವೆಯರು ನಿರ್ಗತಿಕರಾಗಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೆಯೇ 1 ಅಕ್ಟೋಬರ್ 1997 ರಿಂದ 30 ಸೆಪ್ಟೆಂಬರ್ 2005 ರ ನಡುವೆ ಜನಿಸಿರಬೇಕು.

ವಿದ್ಯಾರ್ಹತೆ: ಅಭ್ಯರ್ಥಿಗಳು 12 ನೇ ತರಗತಿಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳೊಂದಿಗೆ ಮೊದಲ ಪ್ರಯತ್ನದಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅರ್ಹತಾ ಪರೀಕ್ಷೆಯ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ಅವಧಿಯಲ್ಲಿ ಅರ್ಜಿ ಸಲ್ಲಿಸಬಹುದು.

neet ug 2022 ಸ್ಕೋರ್ ಮುಖ್ಯ: ಮಿಲಿಟರಿ ನರ್ಸಿಂಗ್ ಸೇವಾ ನೇಮಕಾತಿ 2022 ರ ಅಡಿಯಲ್ಲಿ B.Sc ನರ್ಸಿಂಗ್ ಕೋರ್ಸ್‌ಗೆ ಪ್ರವೇಶಕ್ಕಾಗಿ, ಅಭ್ಯರ್ಥಿಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಅಂದರೆ NTA ನಡೆಸುವ NEET UG 2022 ಅನ್ನು ಉತ್ತೀರ್ಣರಾಗಿರಬೇಕು.

ಅರ್ಜಿ ಶುಲ್ಕ: SC & ST- ಉಚಿತ ಇತರೆ ವರ್ಗ- ರೂ.200

ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 31, 2022

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.