Indian Army Recruitment 2022: ಸೇನಾ ನೇಮಕಾತಿ: SSLC ಪಾಸಾದವರಿಗೆ ಇಲ್ಲಿದೆ ಸುವರ್ಣಾವಕಾಶ

| Updated By: ಝಾಹಿರ್ ಯೂಸುಫ್

Updated on: Jun 23, 2022 | 7:17 PM

Indian Army Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Army Recruitment 2022: ಸೇನಾ ನೇಮಕಾತಿ: SSLC ಪಾಸಾದವರಿಗೆ ಇಲ್ಲಿದೆ ಸುವರ್ಣಾವಕಾಶ
Indian Army Recruitment 2022
Follow us on

Indian Army Recruitment 2022: ಭಾರತೀಯ ಸೇನೆಯು ಸದರ್ನ್ ಕಮಾಂಡ್ ಮತ್ತು ಸೆಂಟ್ರಲ್ ಕಮಾಂಡ್ ಹೆಡ್​ ಕ್ವಾರ್ಟರ್ಸ್​ನಲ್ಲಿನ ವಾರ್ಡ್ ಸಹಾಯಕ ಮತ್ತು ಕುಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

ಹುದ್ದೆಗಳ ವಿವರಗಳು:

ಒಟ್ಟು ಹುದ್ದೆಗಳ ಸಂಖ್ಯೆ- 155

ಇದನ್ನೂ ಓದಿ
ರಾಜ್ಯ ಬೀಜ ನಿಗಮದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 42 ಸಾವಿರ ರೂ.
Agniveer Recruitment 2022: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿಯ ಅಧಿಸೂಚನೆ ಪ್ರಕಟ
SCI Recruitment 2022: ಸುಪ್ರೀ ಕೋರ್ಟ್ ನೇಮಕಾತಿ: ಪದವಿ ಹೊಂದಿರುವವರಿಗೆ ಅವಕಾಶ, ವೇತನ 63 ಸಾವಿರ ರೂ.
Indian Navy recruitment 2022: ನೌಕಾಪಡೆ ನೇಮಕಾತಿ: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ

ಹುದ್ದೆಗಳ ಹೆಸರು:
-ವಾರ್ಡ್​ ಸಹಾಯಕ
-ಪಾಚಕ (ಕುಕ್)

ಅರ್ಹತಾ ಮಾನದಂಡಗಳು:
ವಾರ್ಡ್ ಸಹಾಯಕ – ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಪಾಸಾಗಿರಬೇಕು.
ಕುಕ್ – 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಭಾರತೀಯ ಅಡುಗೆಯ ಜ್ಞಾನ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಈ ನೇಮಕಾತಿ ಅಧಿಸೂಚನೆಯ ಪ್ರಕಟವಾದ 45 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

 

 

 

Published On - 7:17 pm, Thu, 23 June 22