AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

Indian Army Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ
Indian Army Recruitment 2022
TV9 Web
| Edited By: |

Updated on: Feb 24, 2022 | 7:55 PM

Share

Indian Army Recruitment 2022: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೇನಾ ಶಿಬಿರದ ಇಂಟಿಗ್ರೇಟೆಡ್ ಹೆಡ್​ ಕ್ವಾಟರ್ಸ್​ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್ ಮೋಡ್‌ನಲ್ಲಿ ಸಲ್ಲಿಸಬೇಕಾಗುತ್ತದೆ. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Army Recruitment 2022: ಹುದ್ದೆಯ ವಿವರಗಳು: MTS (ಸಫಾಯಿವಾಲ) – ಒಟ್ಟು ಹುದ್ದೆಗಳು- 7 ಸಾಮಾನ್ಯ ಅಭ್ಯರ್ಥಿಗಳು – 5 ಹುದ್ದೆಗಳು OBC – 2 ಹುದ್ದೆಗಳು (ಒಂದು ಹುದ್ದೆ ಮಾಜಿ ಸೈನಿಕರಿಗೆ ಕಾಯ್ದಿರಿಸಲಾಗಿದೆ)

Indian Army Recruitment 2022: ಎಂಟಿಎಸ್ ಹುದ್ದೆಗಳ ವೇತನ: MTS (Safaiwala) ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 18000 ರೂ. ವೇತನ ನೀಡಲಾಗುತ್ತದೆ.

Indian Army Recruitment 2022: ವಯೋಮಿತಿ: ಈ ಹುದ್ದೆಗಳಿಗೆ 18 ರಿಂದ 25 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Indian Army Recruitment 2022: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ 10ನೇ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮನೆಗೆಲಸದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಪ್ರವೀಣರಾಗಿರಬೇಕು. ಅಲ್ಲದೆ, ಯಾವುದೇ ಸಿವಿಲ್ / ಸರ್ಕಾರಿ ಕಚೇರಿಯಲ್ಲಿ ಆರು ತಿಂಗಳ ಕೆಲಸದ ಅನುಭವ ಹೊಂದಿರಬೇಕು.

Indian Army Recruitment 2022: ಆಯ್ಕೆ ಪ್ರಕ್ರಿಯೆ: MTS ಹುದ್ದೆಗೆ ಅರ್ಹ ಅಭ್ಯರ್ಥಿಗಳ ಆಯ್ಕೆಯನ್ನು ಸ್ಕ್ರೀನಿಂಗ್ ಮತ್ತು ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಸ್ಕ್ರೀನಿಂಗ್ 10 ನೇ ತರಗತಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿರುತ್ತದೆ.

Indian Army Recruitment 2022: ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕೆ ಗೆಜೆಟೆಡ್ ಅಧಿಕಾರಿಯಿಂದ ಅಗತ್ಯ ದಾಖಲೆಗಳ ದೃಢೀಕರಿಸಿದ ಫೋಟೊಕಾಪಿಗಳೊಂದಿಗೆ ಲಕೋಟೆಯಲ್ಲಿ ಅರ್ಜಿ ನಮೂನೆಯನ್ನು ಸಲ್ಲಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ: HQ Mod (Army) Camp, Rao Ram Marg, NEW Delhi-110010

(Indian Army Recruitment 2022: Here Is How To Apply For 7 MTS Posts)

Follow Us
TV9 Web
TV9 Web

TV9 Kannada

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ