Indian Army Recruitment 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

| Updated By: ಝಾಹಿರ್ ಯೂಸುಫ್

Updated on: Feb 24, 2022 | 7:55 PM

Indian Army Recruitment 2022: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Indian Army Recruitment 2022: 10ನೇ ತರಗತಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ
Indian Army Recruitment 2022
Follow us on

Indian Army Recruitment 2022: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೇನಾ ಶಿಬಿರದ ಇಂಟಿಗ್ರೇಟೆಡ್ ಹೆಡ್​ ಕ್ವಾಟರ್ಸ್​ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗಾಗಿ ಅರ್ಜಿಯನ್ನು ಆಫ್‌ಲೈನ್ ಮೋಡ್‌ನಲ್ಲಿ ಸಲ್ಲಿಸಬೇಕಾಗುತ್ತದೆ. ಅಂದರೆ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Army Recruitment 2022: ಹುದ್ದೆಯ ವಿವರಗಳು:
MTS (ಸಫಾಯಿವಾಲ) – ಒಟ್ಟು ಹುದ್ದೆಗಳು- 7
ಸಾಮಾನ್ಯ ಅಭ್ಯರ್ಥಿಗಳು – 5 ಹುದ್ದೆಗಳು
OBC – 2 ಹುದ್ದೆಗಳು (ಒಂದು ಹುದ್ದೆ ಮಾಜಿ ಸೈನಿಕರಿಗೆ ಕಾಯ್ದಿರಿಸಲಾಗಿದೆ)

Indian Army Recruitment 2022: ಎಂಟಿಎಸ್ ಹುದ್ದೆಗಳ ವೇತನ:
MTS (Safaiwala) ಹುದ್ದೆಗೆ ನೇಮಕಗೊಂಡ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 18000 ರೂ. ವೇತನ ನೀಡಲಾಗುತ್ತದೆ.

Indian Army Recruitment 2022: ವಯೋಮಿತಿ:
ಈ ಹುದ್ದೆಗಳಿಗೆ 18 ರಿಂದ 25 ವರ್ಷಗಳ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Indian Army Recruitment 2022: ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಮಂಡಳಿಯಿಂದ 10ನೇ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮನೆಗೆಲಸದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಪ್ರವೀಣರಾಗಿರಬೇಕು. ಅಲ್ಲದೆ, ಯಾವುದೇ ಸಿವಿಲ್ / ಸರ್ಕಾರಿ ಕಚೇರಿಯಲ್ಲಿ ಆರು ತಿಂಗಳ ಕೆಲಸದ ಅನುಭವ ಹೊಂದಿರಬೇಕು.

Indian Army Recruitment 2022: ಆಯ್ಕೆ ಪ್ರಕ್ರಿಯೆ:
MTS ಹುದ್ದೆಗೆ ಅರ್ಹ ಅಭ್ಯರ್ಥಿಗಳ ಆಯ್ಕೆಯನ್ನು ಸ್ಕ್ರೀನಿಂಗ್ ಮತ್ತು ಲಿಖಿತ ಪರೀಕ್ಷೆ / ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಸ್ಕ್ರೀನಿಂಗ್ 10 ನೇ ತರಗತಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಆಧರಿಸಿರುತ್ತದೆ.

Indian Army Recruitment 2022: ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದಕ್ಕೆ ಗೆಜೆಟೆಡ್ ಅಧಿಕಾರಿಯಿಂದ ಅಗತ್ಯ ದಾಖಲೆಗಳ ದೃಢೀಕರಿಸಿದ ಫೋಟೊಕಾಪಿಗಳೊಂದಿಗೆ ಲಕೋಟೆಯಲ್ಲಿ ಅರ್ಜಿ ನಮೂನೆಯನ್ನು ಸಲ್ಲಿಸಿ.

ಅರ್ಜಿ ಕಳುಹಿಸಬೇಕಾದ ವಿಳಾಸ:
HQ Mod (Army) Camp,
Rao Ram Marg,
NEW Delhi-110010

 

(Indian Army Recruitment 2022: Here Is How To Apply For 7 MTS Posts)