Indian Army Recruitment 2022: ಭಾರತೀಯ ಸೇನೆಯು 180 ಕ್ಕೂ ಹೆಚ್ಚು ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ joinindianarmy.nic.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಈ ಹುದ್ದೆಗಳಿಗೆ ಅವಿವಾಹಿತ ಪುರುಷ ಮತ್ತು ಅವಿವಾಹಿತ ಮಹಿಳಾ ಇಂಜಿನಿಯರಿಂಗ್ ಪದವೀಧರರು ಮಾತ್ರ ಅರ್ಜಿ ಸಲ್ಲಿಸಬೇಕೆಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದಾಗ್ಯೂ ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿಯ ವಿಧವೆಯರು ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Indian Army Recruitment 2022:ಖಾಲಿ ಹುದ್ದೆಗಳ ಸಂಖ್ಯೆ
SSC(ಟೆಕ್) – 175 ಹುದ್ದೆಗಳು
SSCW(ಟೆಕ್) – 14 ಹುದ್ದೆಗಳು
ರಕ್ಷಣಾ ಸಿಬ್ಬಂದಿಯ ವಿಧವೆಯರಿಗೆ – 02 ಹುದ್ದೆಗಳು
Indian Army Recruitment 2022: ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಅಗತ್ಯವಾದ ಇಂಜಿನಿಯರಿಂಗ್ ಪದವಿ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಎಂಜಿನಿಯರಿಂಗ್ ಪದವಿ ಕೋರ್ಸ್‌ನ ಅಂತಿಮ ವರ್ಷದಲ್ಲಿರಬೇಕು.
Indian Army Recruitment 2022: ವಯೋಮಿತಿ:
SSC (ಟೆಕ್) ಮತ್ತು SSCW(ಟೆಕ್)- ಈ ಹುದ್ದೆಗಳಿಗೆ 20 ರಿಂದ 27 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿ. ಸೂ: (02 ಅಕ್ಟೋಬರ್ 1995 ಮತ್ತು 01 ಅಕ್ಟೋಬರ್ 2002 ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ).
ಭಾರತೀಯ ಸಶಸ್ತ್ರ ಪಡೆಗಳ ರಕ್ಷಣಾ ಸಿಬ್ಬಂದಿಯ ವಿಧವೆಯರಿಗೆ: ಅಕ್ಟೋಬರ್ 1, 2022 ರಂತೆ ಗರಿಷ್ಠ 35 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Indian Army Recruitment 2022: ಅರ್ಜಿ ಸಲ್ಲಿಸುವುದು ಹೇಗೆ:
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ www.joinindianarmy.nic.in ಮೂಲಕ ಆನ್ಲೈನ್ನಲ್ಲೇ ಅರ್ಜಿ ಸಲ್ಲಿಸಬಹುದು.
Indian Army Recruitment 2022: ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 6 (ಮಧ್ಯಾಹ್ನ 3 ಗಂಟೆ).
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು