ಭಾರತೀಯ ಸೇನೆಯಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ: ವೇತನ 63 ಸಾವಿರ ರೂ.
Indian Army Recruitment 2022: ಲಿಖಿತ ಪರೀಕ್ಷೆ, ಪ್ರಾಯೋಗಿಕ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Indian Army Recruitment 2022: ಭಾರತೀಯ ಸೇನೆಯಲ್ಲಿನ ಹಲವು ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಭಾರತೀಯ ಸೇನೆಯು ಕುಕ್, ವಾಷರ್‌ಮನ್ (MTS), ಸಫಾಯಿವಾಲಾ, ಬಾರ್ಬರ್ ಮತ್ತು LDC ಹುದ್ದೆಗಳಿಗೆ ಮೆಕಾನೈಸ್ಡ್ ಇನ್‌ಫ್ಯಾಂಟ್ರಿ ರೆಜಿಮೆಂಟಲ್ ಸೆಂಟರ್ (MIRC) ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಪೋಸ್ಟ್‌ಗಳಿಗೆ (Indian Army Recruitment 2022) ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳ ವಿವರ: ಕುಕ್ (ಅಡುಗೆ) – 11 (UR-7, SC-1, OBC-2, EWS-1) ವಾಷರ್ – 3 (UR-3) ಸಫಾಯಿವಾಲಾ (MTS) – 13 (UR-8, SC-1, OBC-3, EWS-1 ) ಕ್ಷೌರಿಕ – 7 (UR-5, SC-1, OBC-1) LDC (HQ) – 7 (UR-5, SC-1, OBC-1) LDC (MIR) – 4 (UR-3, OBC- 1))
ವೇತನ: ಅಡುಗೆ ಮತ್ತು LDC ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಧಿಗಳಿಗೆ- ರೂ. 19,900 ರಿಂದ 63,200 ರೂ.ವರೆಗೆ ವೇತನ ನೀಡಲಾಗುತ್ತದೆ. ಇತರೆ ಹುದ್ದೆಗಳಿಗೆ ಆಯ್ಕೆಯಾದವರಿಗೆ 18000 ದಿಂದ 56900 ರೂ.ವರೆಗೆ ವೇತನ ಸಿಗಲಿದೆ.
ಅರ್ಹತಾ ಮಾನದಂಡಗಳು: ಕುಕ್ – ಅಭ್ಯರ್ಥಿಗಳು ಭಾರತೀಯ ಅಡುಗೆಯ ಜ್ಞಾನದೊಂದಿಗೆ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ವಾಷರ್ – 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಫಾಯಿವಾಲಾ (MTS) – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಕ್ಷೌರಿಕ – 10 ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. LDC – ಕಂಪ್ಯೂಟರ್ ಟೈಪಿಂಗ್ನಲ್ಲಿ ನಿಮಿಷಕ್ಕೆ 35 ಇಂಗ್ಲಿಷ್ ಪದಗಳು ಮತ್ತು ಹಿಂದಿಯಲ್ಲಿ ನಿಮಿಷಕ್ಕೆ 30 ಪದಗಳ ಟೈಪಿಂಗ್ ವೇಗ ಹೊಂದಿರಬೇಕು. ಅದರ ಜೊತೆಗೆ 12 ನೇ ಪಾಸ್ ಆಗಿರಬೇಕು.
ವಯೋಮಿತಿ: 18 ರಿಂದ 25 ವರ್ಷಗಳ ಒಳಗಿರುವ ಸಾಮಾನ್ಯ ಮತ್ತು EWS ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 18 ರಿಂದ 28 ವರ್ಷಗಳ OBC ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 18 ರಿಂದ 30 ವರ್ಷಗಳ ಒಳಗಿರುವ SC / ST ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಪ್ರಾಯೋಗಿಕ ಮತ್ತು ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 12 ಫೆಬ್ರವರಿ 2022
ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪರಿಶೀಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: IND vs WI: ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಲ್ಲಿದ್ದ 5 ಆಟಗಾರರು ಟೀಮ್ ಇಂಡಿಯಾದಿಂದ ಔಟ್..!
ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ
ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್