Indian Bank Recruitment 2022: ಇಂಡಿಯನ್ ಬ್ಯಾಂಕ್ನಲ್ಲಿ SSLC ಪಾಸಾದವರಿಗೆ ಉದ್ಯೋಗಾವಕಾಶ
Indian Bank Recruitment 2022: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 26 ವರ್ಷಗಳಾಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ 29 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Indian Bank Recruitment 2022: ಉದ್ಯೋಗವನ್ನು ಎದುರು ನೋಡುತ್ತಿರುವ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶವಿದೆ. ಏಕೆಂದರೆ ಇಂಡಿಯನ್ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಂಡಿಯನ್ ಬ್ಯಾಂಕ್ನ ಅಧಿಕೃತ ವೆಬ್ಸೈಟ್ indianbank.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Indian Bank Recruitment 2022: ಹುದ್ದೆಗಳು ವಿವರಗಳು: ಭದ್ರತಾ ಸಿಬ್ಬಂದಿ: 202 ಹುದ್ದೆಗಳು
Indian Bank Recruitment 2022 ಗಾಗಿ ಅರ್ಹತಾ ಮಾನದಂಡಗಳು: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ರಾಜ್ಯ ಶಿಕ್ಷಣ ಮಂಡಳಿಯಿಂದ 10 ನೇ ತರಗತಿ (SSLC/ಮೆಟ್ರಿಕ್ಯುಲೇಷನ್) ಉತ್ತೀರ್ಣರಾಗಿರಬೇಕು ಅಥವಾ ಸೇನೆ/ನೌಕಾಪಡೆ/ವಾಯುಸೇನೆಯಿಂದ ಮಾಜಿ ಸೈನಿಕರಾಗಿರಬೇಕು. ಅಲ್ಲದೆ, ಅಭ್ಯರ್ಥಿಯು ಸ್ಥಳೀಯ ಆಡುಭಾಷೆಯಲ್ಲಿ ಮಾತನಾಡಲು, ಓದಲು ಮತ್ತು ಬರೆಯಲು ಸಮರ್ಥರಾಗಿರಬೇಕು.
Indian Bank Recruitment 2022 ರ ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 26 ವರ್ಷಗಳಾಗಿರಬೇಕು. ಇನ್ನು ಮೀಸಲಾತಿ ವರ್ಗಗಳಿಗೆ ವಯೋಮಿತಿ 29 ವರ್ಷದವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Indian Bank Recruitment 2022 ಗಾಗಿ ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 14500 ರಿಂದ 28 ಸಾವಿರದವರೆಗೆ ತಿಂಗಳ ವೇತನವಾಗಿ ಸಿಗಲಿದೆ.
Indian Bank Recruitment 2022 ಆಯ್ಕೆ ಪ್ರಕ್ರಿಯೆ: ಆಬ್ಜೆಕ್ಟಿವ್ ಟೈಪ್ ಟೆಸ್ಟ್ – ಆನ್‌ಲೈನ್ ಸ್ಥಳೀಯ ಭಾಷಾ ಪರೀಕ್ಷೆ ದೈಹಿಕ ಫಿಟ್‌ನೆಸ್ ಪರೀಕ್ಷೆ ಲಘು ಮೋಟಾರು ವಾಹನದ ಮಾನ್ಯವಾದ ವಾಣಿಜ್ಯ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆಯನ್ನು ನೀಡಲಾಗುತ್ತದೆ.
Indian Bank Recruitment 2022ರ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 09 ಮಾರ್ಚ್ 2022
Indian Bank Recruitment 2022 ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು .
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.
ಇದನ್ನೂ ಓದಿ: World Record: ಟಿ20 ಕ್ರಿಕೆಟ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಯುವ ಬ್ಯಾಟ್ಸ್ಮನ್
ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ
ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!
(Indian Bank Recruitment 2022 Apply Online for 202 Security Guard Posts)