Indian Bank Recruitment 2022: 10ನೇ ತರಗತಿ ಪಾಸಾದವರಿಗೆ ಇಂಡಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ
Indian Bank Recruitment 2022: 15 ವರ್ಷಗಳ ಅನುಭವ ಹೊಂದಿರುವ ಮೆಟ್ರಿಕ್ಯುಲೇಟ್ ಮಾಜಿ ಸೈನಿಕರನ್ನು "ಪದವೀಧರರು" ಎಂದು ಪರಿಗಣಿಸಲಾಗುತ್ತದೆ. ಅವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
Indian Bank Recruitment 2022: ಇಂಡಿಯನ್ ಬ್ಯಾಂಕ್ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ — indianbank.in ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂರತಿವೆ.
Indian Bank Recruitment 2022 ಹುದ್ದೆಗಳ ವಿವರಗಳು: ಸೆಕ್ಯುರಿಟಿ ಗಾರ್ಡ್: 202 ಹುದ್ದೆಗಳು
Indian Bank Recruitment 2022 ಅರ್ಹತಾ ಮಾನದಂಡ: ಅಭ್ಯರ್ಥಿಯು ಸೇನೆ/ನೌಕಾಪಡೆ/ವಾಯುಸೇನೆಯಿಂದ ನಿವೃತ್ತಿ ಹೊಂದಿರಬೇಕು. ಅಂದರೆ ಮಾಜಿ ಸೈನಿಕರಾಗಿರಬೇಕು. ಹಾಗೆಯೇ ಅಭ್ಯರ್ಥಿಯು ಮಾನ್ಯತೆ ಪಡೆದ ರಾಜ್ಯ ಶಿಕ್ಷಣ ಮಂಡಳಿಯಿಂದ 10 ನೇ ತರಗತಿ (ಎಸ್‌ಎಸ್‌ಸಿ/ಮೆಟ್ರಿಕ್ಯುಲೇಷನ್) ಪಾಸಾಗಿರಬೇಕು. ಪದವಿ ಅಥವಾ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಲ್ಲ. ಆದಾಗ್ಯೂ, 15 ವರ್ಷಗಳ ಅನುಭವ ಹೊಂದಿರುವ ಮೆಟ್ರಿಕ್ಯುಲೇಟ್ ಮಾಜಿ ಸೈನಿಕರನ್ನು “ಪದವೀಧರರು” ಎಂದು ಪರಿಗಣಿಸಲಾಗುತ್ತದೆ. ಅವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
Indian Bank Recruitment 2022 ವಯೋಮಿತಿ: ಈ ಹುದ್ದೆಗಳಿಗೆ 45 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Indian Bank Recruitment 2022 ಆಯ್ಕೆ ಪ್ರಕ್ರಿಯೆ: ಆಬ್ಜೆಕ್ಟಿವ್ ಟೈಪ್ ಟೆಸ್ಟ್ – ಆನ್‌ಲೈನ್: ಆಬ್ಜೆಕ್ಟಿವ್ ಟೈಪ್ ಪರೀಕ್ಷೆಯು 90 ನಿಮಿಷಗಳ ಅವಧಿಗೆ 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಸ್ಥಳೀಯ ಭಾಷೆಯ ಪರೀಕ್ಷೆ: ಸ್ಥಳೀಯ ಭಾಷೆಯಲ್ಲಿ ಪರೀಕ್ಷೆಯು 10 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ದೈಹಿಕ ಸಾಮರ್ಥ್ಯ ಪರೀಕ್ಷೆ.
Indian Bank Recruitment 2022 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ – www.indianbank.in ಮೂಲಕ ಅರ್ಜಿ ಸಲ್ಲಿಸಬಹುದು.
Indian Bank Recruitment 2022 ಪ್ರಮುಖ ದಿನಾಂಕಗಳು: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 09, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: Ipl 2022 Rcb Schedule: RCB ತಂಡ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?