ICGAC Recruitment 2022: ಕರಾವಳಿ ಭದ್ರತಾ ಪಡೆಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Coast Guard AC Recruitment 2022: ಅಭ್ಯರ್ಥಿಯು ಭೌತಶಾಸ್ತ್ರ ಮತ್ತು ಗಣಿತ ವಿಷಯಗಳೊಂದಿಗೆ 12 ನೇ ಅಥವಾ ತತ್ಸಮಾನ ಪ್ರಮಾಣಪತ್ರವನ್ನು ಹೊಂದಿರಬೇಕು.

ICGAC Recruitment 2022: ಕರಾವಳಿ ಭದ್ರತಾ ಪಡೆಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 17, 2022 | 9:00 AM

Indian Coast Guard AC Recruitment 2022: ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿನ ಸಹಾಯಕ ಕಮಾಂಡೆಂಟ್ (ಗ್ರೂಪ್ ಎ ಗೆಜೆಟೆಡ್ ಆಫೀಸರ್) ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್‌ joinindiancoastguard.cdac.in. ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಳು ಈ ಕೆಳಗಿನಂತಿವೆ.

Indian Coast Guard AC Recruitment 2022ರ ಹುದ್ದೆಗಳ ವಿವರಗಳು: ಸಹಾಯಕ ಕಮಾಂಡೆಂಟ್ ಹುದ್ದೆಗಳ ಸಂಖ್ಯೆ (ಗ್ರೂಪ್ ಎ ಗೆಜೆಟೆಡ್ ಆಫೀಸರ್) – 65 ಹುದ್ದೆಗಳು

Indian Coast Guard AC Recruitment 2022 ಗಾಗಿ ಅರ್ಹತಾ ಮಾನದಂಡಗಳು: ಜನರಲ್ ಡ್ಯೂಟಿ GD/ಪೈಲಟ್/ನ್ಯಾವಿಗೇಟರ್/ವುಮೆನ್ SSA – ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಪದವೀಧರರಾಗಿರಬೇಕು. ಅಲ್ಲದೆ 10+2 ಹಂತದ ಪರೀಕ್ಷೆ ಅಥವಾ ತತ್ಸಮಾನದವರೆಗಿನ ವಿಷಯಗಳಲ್ಲಿ ಗಣಿತ, ಭೌತಶಾಸ್ತ್ರ ವಿಷಯವನ್ನು ಹೊಂದಿರಬೇಕು.

ಕಮರ್ಷಿಯಲ್ ಪೈಲಟ್ CPL SSA – ಅಭ್ಯರ್ಥಿಯು ಭೌತಶಾಸ್ತ್ರ ಮತ್ತು ಗಣಿತ ವಿಷಯಗಳೊಂದಿಗೆ 12 ನೇ ಅಥವಾ ತತ್ಸಮಾನ ಪ್ರಮಾಣಪತ್ರವನ್ನು ಹೊಂದಿರಬೇಕು. ಜೊತೆಗೆ ಪ್ರತಿ ವಿಷಯದಲ್ಲೂ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು. ನಾಗರಿಕ ವಿಮಾನಯಾನ ಮಹಾನಿರ್ದೇಶಕರು ನೀಡಿದ / ಮಾನ್ಯವಾಗಿರುವ ಪ್ರಸ್ತುತ ವಾಣಿಜ್ಯ ಪೈಲಟ್ ಪರವಾನಗಿಯನ್ನು ಹೊಂದಿರಬೇಕು.

ಟೆಕ್ನಿಕಲ್ ಮೆಕ್ಯಾನಿಕಲ್ – ನೇವಲ್ ಆರ್ಕಿಟೆಕ್ಚರ್ ಅಥವಾ ಮೆಕ್ಯಾನಿಕಲ್ ಅಥವಾ ಮೆರೈನ್ ಅಥವಾ ಆಟೋಮೋಟಿವ್ ಅಥವಾ ಇಂಡಸ್ಟ್ರಿಯಲ್ ಮತ್ತು ಪ್ರೊಡಕ್ಷನ್ ಅಥವಾ ಮೆಟಲರ್ಜಿ ಅಥವಾ ಡಿಸೈನ್ ಅಥವಾ ಏರೋನಾಟಿಕಲ್ ಅಥವಾ ಏರೋಸ್ಪೇಸ್ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಎಂಜಿನಿಯರಿಂಗ್ ಪದವಿ ಪಡೆದಿರಬೇಕು.

ಟೆಕ್ನಿಕಲ್ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ – ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಾನಿಕ್ಸ್ ಅಥವಾ ಟೆಲಿಕಮ್ಯುನಿಕೇಶನ್ ಅಥವಾ ಇನ್‌ಸ್ಟ್ರುಮೆಂಟೇಶನ್ ಅಥವಾ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಅಥವಾ ಪವರ್ ಎಂಜಿನಿಯರಿಂಗ್ ಅಥವಾ ಪವರ್ ಎಲೆಕ್ಟ್ರಾನಿಕ್ಸ್‌ನಲ್ಲಿ ಎಂಜಿನಿಯರಿಂಗ್ ಪದವಿಯನ್ನು ಪಡೆದಿರಬೇಕು.

Indian Coast Guard AC Recruitment 2022ರ ವಯೋಮಿತಿ: ಜನರಲ್ ಡ್ಯೂಟಿ GD/ಪೈಲಟ್/ನ್ಯಾವಿಗೇಟರ್/ಮಹಿಳಾ SSA ಹುದ್ದೆಗಳಿಗೆ 01/07/1998 ರಿಂದ 30/06/2002 ಒಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಾಣಿಜ್ಯ ಪೈಲಟ್ CPL SSA ಹುದ್ದೆಗಳಿಗೆ 01/07/1998 ರಿಂದ 30/06/2004 ಒಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಟೆಕ್ನಿಕಲ್ ಮೆಕ್ಯಾನಿಕಲ್ ಹುದ್ದೆಗಳಿಗೆ 01/07/1990 ರಿಂದ /2002 ಒಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಟೆಕ್ನಿಕಲ್ ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಹುದ್ದೆಗಳಿಗೆ 01/07/1998 ರಿಂದ 30/06/2002 ಒಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕಾನೂನು ಪ್ರವೇಶ ಹುದ್ದೆಗಳಿಗೆ 01/07/1993 ರಿಂದ 30/06/2002 ಒಳಗೆ ಜನಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Indian Coast Guard AC Recruitment 2022 ರ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಫೆಬ್ರವರಿ 2022

ಅರ್ಜಿ ಸಲ್ಲಿಸುವುದು ಹೇಗೆ? ಈ ಹುದ್ದೆಗಳಿಗೆ (ಭಾರತೀಯ ಕೋಸ್ಟ್ ಗಾರ್ಡ್ ಎಸಿ ನೇಮಕಾತಿ 2022) ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಮತ್ತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022 ನಲ್ಲಿ ಕೋಟಿ ಸಿಗುತ್ತಿದ್ದಂತೆ ಪಾಕಿಸ್ತಾನ ಸೂಪರ್ ಲೀಗ್ ತೊರೆದ ಸ್ಟಾರ್ ಆಟಗಾರ

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(Indian Coast Guard AC Recruitment 2022)

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!