ICG Recruitment 2022: SSLC ಪಾಸಾದವರಿಗೆ ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿದೆ ಉದ್ಯೋಗಾವಕಾಶ
Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿನ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ICG Recruitment 2022: ಭಾರತೀಯ ಕರಾವಳಿ ಭದ್ರತಾ ಪಡೆಯ ವೆಸ್ಟರ್ನ್ ರೀಜನ್ ಜನರಲ್ ಸೆಂಟ್ರಲ್ ಸರ್ವೀಸ್ ಗ್ರೂಪ್ ಸಿ ನಾನ್ ಗೆಜೆಟೆಡ್ ಕೆಟಗರಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದರ ಅಡಿಯಲ್ಲಿ ಮೋಟಾರ್ ಟ್ರಾನ್ಸ್‌ಪೋರ್ಟ್, ಸ್ಪ್ರೇ ಪೇಂಟರ್ ಮತ್ತು ಮೋಟಾರ್ ಟ್ರಾನ್ಸ್‌ಪೋರ್ಟ್ ಮೆಕ್ಯಾನಿಕ್ ಹುದ್ದೆಗಳಿಗೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು: ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ – 05 ಹುದ್ದೆಗಳು ಸ್ಪ್ರೇ ಪೇಂಟರ್ – 1 ಹುದ್ದೆ ಮೋಟಾರ್ ಟ್ರಾನ್ಸ್‌ಪೋರ್ಟ್ ಮೆಕ್ಯಾನಿಕ್ – 1 ಹುದ್ದೆ
ಶೈಕ್ಷಣಿಕ ಅರ್ಹತೆ: ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್/ಮೆಕ್ಯಾನಿಕ್ ಹುದ್ದೆಗಳಿಗೆ:- – 10ನೇ ತರಗತಿ ಪಾಸ್ ಆಗಿರಬೇಕು. – ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು. – ಆಟೋಮೊಬೈಲ್ ಕಾರ್ಯಾಗಾರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಸ್ಪ್ರೇ ಪೇಂಟರ್ ಹುದ್ದೆಗಳಿಗೆ:- – 10 ನೇ ತರಗತಿ ಪಾಸ್ ಆಗಿರಬೇಕು. – ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡಿರಬೇಕು. – ಸಂಬಂಧಿತ ವಿಷಯದಲ್ಲಿ ಎರಡು ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.
ವಯೋಮಿತಿ: 18 ರಿಂದ 27 ವರ್ಷಗಳೊಳಗಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನ: ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19 ಸಾವಿರಕ್ಕಿಂತ ಹೆಚ್ಚಿನ ವೇತನ ಸಿಗಲಿದೆ.
ಪ್ರಮುಖ ದಿನಾಂಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 9, 2022.
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.
——————————————————————————————————————-
ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ನರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ:
SAIL Recruitment 2022: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಬೊಕಾರೊ ಜನರಲ್ ಆಸ್ಪತ್ರೆಯು ನರ್ಸ್ ಹುದ್ದೆಗಳಿಗಾಗಿ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.
ವಿವರಗಳು:
ಒಟ್ಟು ಖಾಲಿ ಹುದ್ದೆಗಳು: 34
ಹುದ್ದೆಯ ಹೆಸರು: ನರ್ಸ್ ಹುದ್ದೆಗಳು
ತರಬೇತಿ ಅವಧಿ: 12 ತಿಂಗಳುಗಳು
ವೇತನ ಶ್ರೇಣಿ: ತಿಂಗಳಿಗೆ ರೂ.15,020 ವರೆಗೆ ವೇತನ ನೀಡಲಾಗುತ್ತದೆ.
ವಯೋಮಿತಿ: ಅಭ್ಯರ್ಥಿಗಳು ಮಾರ್ಚ್ 31, 2022 ರೊಳಗೆ 30 ವರ್ಷಗಳನ್ನು ಮೀರಬಾರದು.
ವಿದ್ಯಾರ್ಹತೆಗಳು: ಯಾವುದೇ ಮಾನ್ಯತೆ ಪಡೆದ ನರ್ಸಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಬಿಎಸ್‌ಸಿ ನರ್ಸಿಂಗ್ / ಜಿಎನ್‌ಎಂ ಡಿಪ್ಲೊಮಾ ಉತ್ತೀರ್ಣರಾಗಿರಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತ ಅಭ್ಯರ್ಥಿಗಳು ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು.
ವಿಳಾಸ: Conference Hall, Ground Floor, Bokaro Steel Plant, Bokaro General Hospital, Jharkhand- 827004
ಸಂದರ್ಶನದ ದಿನಾಂಕ: ಜೂನ್ 6, 2022 ರಂದು ರಾತ್ರಿ 9 ಗಂಟೆಗೆ
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಹೆಚ್ಚಿನ ಉದ್ಯೋಗ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.