Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿನ ಇಂಜಿನ್ ಡ್ರೈವರ್ ಸೇರಿದಂತೆ ವಿವಿಧ ಸಿವಿಲಿಯನ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್ನ ಅಧಿಕೃತ ವೆಬ್ಸೈಟ್ indiancoastguard.gov.in ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಜಾಹೀರಾತು ಪ್ರಕಟವಾದ 30 ದಿನಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಹೀಗಾಗಿ ಶೀಘ್ರದಲ್ಲೇ ಅರ್ಜಿ ಸಲ್ಲಿಸುವುದು ಉತ್ತಮ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
Indian Coast Guard Recruitment 2022: ಹುದ್ದೆಗಳ ವಿವರಗಳು:
ಈ ನೇಮಕಾತಿ ಅಡಿಯಲ್ಲಿ ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಇಂಜಿನ್ ಚಾಲಕ: 7 ಹುದ್ದೆಗಳು
ಸಾರಂಗ್ ಲಾಸ್ಕರ್: 7 ಹುದ್ದೆಗಳು
ಲಾಸ್ಕರ್ 1 ನೇ ತರಗತಿ: 2 ಹುದ್ದೆಗಳು
Indian Coast Guard Recruitment 2022: ಅರ್ಹತಾ ಮಾನದಂಡ:
ಇಂಜಿನ್ ಡ್ರೈವರ್ – ಇಂಜಿನ್ ಡ್ರೈವರ್ ಲೈಸನ್ಸ್ನೊಂದಿಗೆ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು.
ಸಾರಂಗ್ ಲಷ್ಕರ್- ಸಾರಂಗ್ ಪ್ರಮಾಣಪತ್ರದೊಂದಿಗೆ 10ನೇ ತರಗತಿ ಪಾಸ್ ಆಗಿರಬೇಕು.
Indian Coast Guard Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ನೇಮಕಾತಿಗಾಗಿ ನೀವು ಅರ್ಜಿಯನ್ನು ಆಫ್ಲೈನ್ನಲ್ಲಿ ಮಾಡಲಾಗುತ್ತದೆ. ಅಂದರೆ ಅಂಚೆ ಇಲಾಖೆಯ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿವೆ…
The Commander, Coast Guard Region (A&N),
Port Blair, Post Box No. 716,
Haddo (P0), Port Blair – 744 102,
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅರ್ಜಿಯನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.
ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?
ಇದನ್ನೂ ಓದಿ: IPL 2022: ಐಪಿಎಲ್ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್
(Indian Coast Guard Recruitment 2022: Applications Invited For 16 Posts)