ICG Recruitment 2022: ಕರಾವಳಿ ಭದ್ರತಾಪಡೆಯಲ್ಲಿದೆ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

| Updated By: ಝಾಹಿರ್ ಯೂಸುಫ್

Updated on: Mar 23, 2022 | 8:07 PM

Indian Coast Guard Recruitment 2022: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

ICG Recruitment 2022: ಕರಾವಳಿ ಭದ್ರತಾಪಡೆಯಲ್ಲಿದೆ ಉದ್ಯೋಗಾವಕಾಶ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
Indian Coast Guard Recruitment 2022
Follow us on

Indian Coast Guard Recruitment 2022: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿನ ಎನ್‌ರೋಲ್ ಫಾಲೋವರ್ / ಸಫೈವಾಲಾ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಕೋರಿದೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ಕೋಸ್ಟ್ ಗಾರ್ಡ್‌ನ ಅಧಿಕೃತ ವೆಬ್‌ಸೈಟ್ joinindiancoastguard.cdac.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 30. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.

Indian Coast Guard Recruitment 2022: ಹುದ್ದೆಗಳ ವಿವರಗಳು:
ಒಟ್ಟು ಹುದ್ದೆಗಳ ಸಂಖ್ಯೆ – 8

Indian Coast Guard Recruitment 2022: ಅರ್ಹತಾ ಮಾನದಂಡಗಳು:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ/ಐಟಿಐ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Indian Coast Guard Recruitment 2022: ವಯೋಮಿತಿ:
ಈ ಹುದ್ದೆಗಳಿಂದ 18 ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Indian Coast Guard Recruitment 2022: ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ, ವೃತ್ತಿಪರ ಕೌಶಲ್ಯ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಶಾರ್ಟ್‌ಲಿಸ್ಟ್ ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Indian Coast Guard Recruitment 2022: ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 30, 2022

Indian Coast Guard Recruitment 2022: ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅಂದು ಪರ್ಪಲ್ ಕ್ಯಾಪ್ ವಿನ್ನರ್, ಇಂದು ನೆಟ್ ಬೌಲರ್..!

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(Indian Coast Guard Recruitment 2022 for 8 Posts)