AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Coast Guard Recruitment 2023: ಭಾರತೀಯ ಕರಾವಳಿ ಪಡೆ ನೇಮಕಾತಿ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Coast Guard Recruitment 2023: ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.

Indian Coast Guard Recruitment 2023: ಭಾರತೀಯ ಕರಾವಳಿ ಪಡೆ ನೇಮಕಾತಿ: ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ
Indian Coast Guard Recruitment 2023
TV9 Web
| Edited By: |

Updated on: Jul 04, 2023 | 2:23 PM

Share

Indian Coast Guard Recruitment 2023: ಭಾರತೀಯ ಕರಾವಳಿ ಪಡೆಯಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ MTS ಮತ್ತು ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಕುರಿತಾದ ಮತ್ತಷ್ಟು ವಿವರಗಳು ಈ ಕೆಳಗಿನಂತಿದೆ.

ಹುದ್ದೆಗಳ ವಿವರಗಳು:

  • ಸಂಸ್ಥೆಯ ಹೆಸರು : ಇಂಡಿಯನ್ ಕೋಸ್ಟ್ ಗಾರ್ಡ್
  • ಹುದ್ದೆಗಳ ಸಂಖ್ಯೆ: 10
  • ಉದ್ಯೋಗ ಸ್ಥಳ: ಅಖಿಲ ಭಾರತ
  • ಹುದ್ದೆಗಳ ಹೆಸರು: MTS, ಸಿವಿಲಿಯನ್ ಮೋಟಾರ್ ಟ್ರಾನ್ಸ್‌ಪೋರ್ಟ್ ಡ್ರೈವರ್

ಹುದ್ದೆಗಳ ಸಂಖ್ಯೆ:

  • ನಾಗರಿಕ ಮೋಟಾರು ಸಾರಿಗೆ ಚಾಲಕ (OG)- 1 ಹುದ್ದೆ
  • ಮೋಟಾರ್ ಟ್ರಾನ್ಸ್‌ಪೋರ್ಟ್ ಫಿಟ್ಟರ್ (Mech)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮೋಟಾರ್ ಟ್ರಾನ್ಸ್‌ಪೋರ್ಟ್ ಕ್ಲೀನರ್)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಮಾಲಿ)- 1 ಹುದ್ದೆ
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಪ್ಯೂನ್)- 2 ಹುದ್ದೆಗಳು
  • ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಸ್ವೀಪರ್)- 2 ಹುದ್ದೆಗಳು

ಶೈಕ್ಷಣಿಕ ಅರ್ಹತೆ:

ಭಾರತೀಯ ಕೋಸ್ಟ್ ಗಾರ್ಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಭಾರತೀಯ ಕೋಸ್ಟ್ ಗಾರ್ಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 18 ವರ್ಷದಿಂದ 27 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

  • OBC ಅಭ್ಯರ್ಥಿಗಳಿಗೆ: 03 ವರ್ಷಗಳು
  • SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

ಆಯ್ಕೆ ಪ್ರಕ್ರಿಯೆ:

ಅರ್ಜಿಗಳ ಪರಿಶೀಲನೆ, ದಾಖಲೆಗಳ ಪರಿಶೀಲನೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್ ಮಾಡಿಕೊಳ್ಳಬೇಕು. ಅಲ್ಲದೆ ಈ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಕಳುಹಿಸಬೇಕಾದ ವಿಳಾಸ:

Director General, {For PD(Rectt)} Coast Guard Headquarters, Directorate of Recruitment, C-1, Phase II, Industrial Area, Sector-62, Noida, U.P. – 201309

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2023

ಇದನ್ನೂ ಓದಿ: Central Bank of India Recruitment: ಬ್ಯಾಂಕ್ ನೇಮಕಾತಿ: 1000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: indiancoastguard.gov.in

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​